ಪೇಜಾವರ ಶ್ರೀಗಳ ಆರೋಗ್ಯದಲ್ಲಿ ತುಸು ಚೇತರಿಕೆ, ಚಿಕಿತ್ಸೆಗೆ ಸ್ಪಂದನೆ

 ಕಳೆದ ಕೆಲ ದಿನಗಳಿಂದ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Published: 25th December 2019 10:56 AM  |   Last Updated: 25th December 2019 10:56 AM   |  A+A-


ಪೇಜಾವರ ಶ್ರೀ

Posted By : Raghavendra Adiga
Source : UNI

ಉಡುಪಿ: ಕಳೆದ ಕೆಲ ದಿನಗಳಿಂದ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ವೆಂಟಿಲೇಟರ್ನಲ್ಲೇ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಶ್ರೀಗಳನ್ನು ವೆಂಟಿಲೇಟರ್ನಲ್ಲಿ ಇಟ್ಟಿರುವುದರಿಂದ ರಾಜಕೀಯ ನಾಯಕರು, ವಿಐಪಿಗಳು ಹಾಗೂ ಯಾವುದೆ ಭಕ್ತರ ಭೇಟಿಗೆ ಅವಕಾಶವಿಲ್ಲ ಹೀಗಾಗಿ ಯಾರೂ ಸಹ ಆಸ್ಪತ್ರೆಗೆ ಬರಬಾರದು ಎಂದು ವೈದ್ಯರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp