'ಇಟಲಿಯಮ್ಮನನ್ನು ಪ್ರಸನ್ನಗೊಳಿಸಲು, ಯೇಸು ಪ್ರತಿಮೆ ಸ್ಥಾಪಿಸಿ ಪೌರುಷ ಪ್ರದರ್ಶಿಸಲು ಸಜ್ಜು'

ಯೇಸುಕ್ರಿಸ್ತನ ಮೂರ್ತಿ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಅವರಿಗೆ ಬಿಜೆಪಿ ನಾಯಕರು ಟ್ವೀಟ್​ ಮೂಲಕ ತಿರುಗೇಟು ನೀಡಿದ್ದಾರೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ಬೆಂಗಳೂರು: ಯೇಸುಕ್ರಿಸ್ತನ ಮೂರ್ತಿ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಅವರಿಗೆ ಬಿಜೆಪಿ ನಾಯಕರು ಟ್ವೀಟ್​ ಮೂಲಕ ತಿರುಗೇಟು ನೀಡಿದ್ದಾರೆ.

ಕನಕಪುರದ ಕಪಾಲಿ ಬೆಟ್ಟದಲ್ಲಿ ನಿರ್ಮಿಸಲು ಉದ್ದೇಶಿಸಲಾಗ್ತಿರುವ ಯೇಸುಕ್ರಿಸ್ತನ ಪ್ರತಿಮೆ ಬಗ್ಗೆ ಸಂಸದ ಅನಂತಕುಮಾರ್​ ಹೆಗಡೆ ಅಪಸ್ವರ ಎತ್ತಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, ಇಲ್ಲೊಬ್ಬ #TiharReturned ಮಹನೀಯರೊಬ್ಬರು, ಯಾವುದೋ ಹುದ್ದೆಯ ಆಸೆಯೊಂದಿಗೆ, ಅವರ ಇಟಲಿಯಮ್ಮನನ್ನು ಪ್ರಸನ್ನಗೊಳಿಸಲು, ಅತೀ ದೊಡ್ಡ ಯೇಸುವಿನ ಪ್ರತಿಮೆ ಸ್ಥಾಪಿಸಿ ತಮ್ಮ ಪೌರುಷವನ್ನು ಪ್ರದರ್ಶಿಸಲು ಸಜ್ಜಾಗಿದ್ದಾರೆ ಎಂದಿದ್ದಾರೆ.

ಅಲ್ಲದೆ ಓಲೈಕೆ ರಾಜಕೀಯಕ್ಕೆ ಪೈಪೋಟಿ ನೀಡಲು ಕಾಂಗ್ರೆಸ್​ನಲ್ಲಿ ಇನ್ನು ಹೆಚ್ಚಿನ ಗುಲಾಮರು ಅಖಾಡಕ್ಕೆ ಇಳಿದರು ಅಚ್ಚರಿಯಿಲ್ಲ ಅಂತಾ ವ್ಯಂಗ್ಯವಾಡಿದ್ದಾರೆ. ಕ್ರೈಸ್ತರಾಗಿ ಮತಾಂತರ ಹೊಂದಿದವರಿಗೆ ಮಾತ್ರ ಕಾಂಗ್ರೆಸ್​ನಲ್ಲಿ ಇಟಲಿಯಮ್ಮ ಮಣೆ ಹಾಕುವುದು. ಈ ಸಂಪ್ರದಾಯ ಅರಿಯದ ಆ ಪಕ್ಷದ ಬಾಕಿ ನಾಯಕರು, ಈಗಲಾದರೂ ಆತ್ಮ-ಸಾಕ್ಷಿ ಇದ್ದಲ್ಲಿ ತಮ್ಮ ಗುಲಾಮಿ ಮನೋಭಾವವನ್ನು ತಿರಸ್ಕರಿಸಿ ಆ ಪಕ್ಷದ ವ್ಯವಸ್ಥೆಯನ್ನು ಧಿಕ್ಕರಿಸಿ ಹೊರಬರಲಿ ಎಂದಿದ್ದಾರೆ.

ಸಚಿವ ಕೆ.ಎಸ್​. ಈಶ್ವರಪ್ಪ ಟ್ವೀಟ್​ ಮೂಲಕ ಕಿಡಿಕಾರಿದ್ದು, ನಮ್ಮ ಪವಿತ್ರ ದೇಶದಲ್ಲೇ ಹುಟ್ಟಿದ ಪ್ರಭು ಶ್ರೀ ರಾಮನ ಭವ್ಯ ಮಂದಿರ ನಿರ್ಮಾಣ ವಿರೋಧಿಸಿದ್ದ ಕಾಂಗ್ರೆಸ್ ನವರು, ತಮ್ಮ ನಾಯಕಿಯನ್ನು ಮೆಚ್ಚಿಸಲು ತಮ್ಮದೇ ಹಣದಲ್ಲಿ ವ್ಯಾಟಿಕನ್​ನಲ್ಲಿ ಹುಟ್ಟಿದ ಯೇಸುವಿನ ಪ್ರತಿಮೆ ನಿರ್ಮಿಸಲು ಹೊರಟಿದ್ದಾರೆ. ಇನ್ನು ಇವರು ಕೆಪಿಸಿಸಿ ಅಧ್ಯಕ್ಷರಾಗುವುದನ್ನು ತಪ್ಪಿಸಲು ಸ್ವತಃ ಸಿದ್ದರಾಮಯ್ಯನವರಿಗೂ ಆಗುವುದಿಲ್ಲ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com