ಹಿಂಸಾಚಾರ ಸೃಷ್ಟಿಸಿದರೆ ಆಸ್ತಿ ಜಪ್ತಿ, ಉ.ಪ್ರದೇಶ ಮಾದರಿ ಅನುಸರಿಸಲು ಸರ್ಕಾರ ಚಿಂತನೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುವ ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಗೆ ಹಾನಿಯುಂಟು ಮಾಡಿದರೆ, ಉತ್ತರಪ್ರದೇಶ ಮಾದರಿಯಲ್ಲಿ ಅಂತಹವರ ಆಸ್ತಿಯನ್ನು ಜಪ್ತಿ ಮಾಡಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿಯವರು ಹೇಳಿದ್ದಾರೆ. 
ಸಚಿವ ಸಿ.ಟಿ.ರವಿ
ಸಚಿವ ಸಿ.ಟಿ.ರವಿ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುವ ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಗೆ ಹಾನಿಯುಂಟು ಮಾಡಿದರೆ, ಉತ್ತರಪ್ರದೇಶ ಮಾದರಿಯಲ್ಲಿ ಅಂತಹವರ ಆಸ್ತಿಯನ್ನು ಜಪ್ತಿ ಮಾಡಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿಯವರು ಹೇಳಿದ್ದಾರೆ. 

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ. ಸಂಸತ್ತಿನಲ್ಲಿ ತ್ರಿವಳಿ ತಲಾಖ್ ಮಸೂದೆ ಮಂಡಿಸಿದಾಗಲೂ ದೇಶ ಹೊತ್ತಿ ಉರಿಯುತ್ತದೆ ಎಂದು ಕಾಂಗ್ರೆಸ್ ನಿರೀಕ್ಷಿತ್ತು. 370 ವಿಧಿ ರದ್ದುಗೊಂಡಾಗಲೂ ರಕ್ತದೋಕುಳಿ ಹರಿಯುತ್ತದೆ ಎಂದು ಹೇಳಿದ್ದರು. ಅಯೋಧ್ಯೆ ತೀರ್ಪು ಬಳಿಕವೂ ಗಲಭೆಯಾಗುತ್ತದೆ ಎಂದಿದ್ದರು. ಆದರೆ, ಇದಾವುದೂ ಆಗಲಿಲ್ಲ. ಹೀಗಾಗಿ ಪೌರತ್ವ ಕಾಯ್ದೆ ಕುರಿತು ಗಲಭೆ ಸೃಷ್ಟಿಸುತ್ತಿದ್ದಾರೆ ಎಂದು ಹೇಳಿದ್ದಾರೆ. 

ಮಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ಯಾವುದೇ ರೀತಿಯಲ್ಲಿ ವಿನಾಯಿತಿ ನೀಡುವುದಿಲ್ಲ. ಜಪ್ತಿ ಮಾಡುವ ಆಸ್ತಿಗಳನ್ನು ಪರಿಹಾರವಾಗಿ ಬಳಸಿಕೊಳ್ಳಲಾಗುತ್ತದೆ. ಮಂಗಳೂರು ಗಲಭೆ ವೇಳೆ ರಾಜ್ಯ ಸರ್ಕಾರ ಪರಿಸ್ಥಿತಿ ನಿಭಾಯಿಸಿದ ರೀತಿ ಶ್ಲಾಘನೀಯ. ಸೂಕ್ತ ಸಮಯಕ್ಕೆ ಪೊಲೀಸರ ಮಧ್ಯಪ್ರವೇಶ ಕೂಡ ಕೊಂಡಾಡುವಂತಹದ್ದು ಎಂದು ತಿಳಿಸಿದ್ದಾರೆ. 

ಮಂಗಳೂರು ಗೋಲಿಬಾರ್ ನಲ್ಲಿ ಮೃತ ವ್ಯಕ್ತಿಗಳಿಗೆ ಪರಿಹಾರ ನೀಡುವಂತೆ ಕಾಂಗ್ರೆಸ್ ಆಗ್ರಹಿಸುತ್ತಿವೆ. ಗಲಭೆಯಲ್ಲಿ ಮೃತು ಭಾಗಿಯಾಗಿಲ್ಲ ಎಂಬುದು ತನಿಖೆಯಲ್ಲಿ ಸಾಬೀತಾದರೆ ಸರ್ಕಾರ ಪರಿಹಾರ  ನೀಡಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com