ಡಾ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ: ಇಬ್ಬರು ವ್ಯವಸ್ಥಾಪಕರು, ಎಂಟು ಅಧಿಕಾರಿಗಳ ಅಮಾನತ್ತು

ಫಲಾನುಭವಿಗಳ ಬದಲಾಗಿ ಮಧ್ಯವರ್ತಿಗಳಿಗೆ ಸಹಾಯಧನ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಎಂಟು ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಫಲಾನುಭವಿಗಳ ಬದಲಾಗಿ ಮಧ್ಯವರ್ತಿಗಳಿಗೆ ಸಹಾಯಧನ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಎಂಟು ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ.

ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ 2016-17 ಹಾಗೂ 2017-18 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಮತ್ತು ಕೈಗಾರಿಕಾ ಸೇವಾ ವ್ಯವಹಾರ ಯೋಜನೆಯಡಿ ಪರಿಶಿಷ್ಠ ಜಾತಿಯ 115 ಫಲಾನುಭವಿಗಳಿಗೆ ಬಿಡುಗಡೆ ಮಾಡಲಾದ 6.30 ಕೋಟಿ ರೂ ಸಹಾಯಧನವನ್ನು ಫಲಾನುಭವಿಗಳ ಬದಲಾಗಿ ಮಧ್ಯವರ್ತಿಗಳಿಗೆ ವರ್ಗಾವಣೆ ಮಾಡಿ ಹಣ ದುರುಪಯೋಗ ಮಾಡಿರುವ ಆರೋಪದ ಮೇರೆಗೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಅಂದಿನ ಜಿಲ್ಲಾ ವ್ಯವಸ್ಥಾಪಕ ಹಾಗೂ ಈಗನ ಉಪ ಪ್ರಧಾನ ವ್ಯವಸ್ಥಾಪಕ ಹೆಚ್ ಆರ್ ಅರುಣ್ ಕುಮಾರ್ ಮತ್ತು ಅಂದಿನ ಜಿಲ್ಲಾ ವ್ಯವಸ್ಥಾಪಕ ಹಾಗೂ ಇಂದಿನ ಉಪ ಪ್ರಧಾನ ವ್ಯವಸ್ಥಾಪಕ ಜೆ ಜಿ ಪದ್ಮನಾಭ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶ ಜಾರಿಮಾಡಿದೆ. 

ಅಲ್ಲದೆ, ಡಾ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿ ಅಧೀಕ್ಷಕಿ ಎಂ ಸಿ ಇಂದಿರಮ್ಮ, ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳಾದ ಪಿ ಮಲ್ಲೇಶ್ ಮತ್ತು ಎನ್ ಮುಕುಂದ, ದ್ವಿತೀಯ ದರ್ಜೆ ಸಹಾಯಕರಾದ ಕಲ್ಪನಾ ಮತ್ತು ಪುಟ್ಟೀರಯ್ಯ, ಅಂದಿನ ಪ್ರಭಾರ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಎಂ ಲಿಂಗಣ್ಣ ಅವರರನ್ನು ಅಮಾನತುಗೊಳಿಸಲಾಗಿದೆ. ನಿಗಮದಲ್ಲಿ ಪ್ರಥಮ ದರ್ಜೆ ಸಹಾಯಕರ ಹುದ್ದೆಯಲ್ಲಿ ಹೊರಗುತ್ತಿಗೆ ಆಧಾರದ ಮೇರೆಗೆ ಕಾರ್ಯ ನಿರ್ವಹಿಸುತ್ತಿದ್ದ ಹೇಮಂತ್ ಕುಮಾರ್ ಅವರನ್ನೂ ಸೇವೆಯಿಂದ ವಜಾ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com