ಪ್ರವಾಸಕ್ಕೆಂದು ಬಂದಿದ್ದ ಮೂವರು ವಿದ್ಯಾರ್ಥಿಗಳು ಕೆರೆ ಪಾಲು

ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಬೆಳಕೋಟಾ ಕೆರೆಯಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಲಬುರಗಿ: ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಬೆಳಕೋಟಾ ಕೆರೆಯಲ್ಲಿ ನಡೆದಿದೆ.

ಮಂಜುನಾಥ್ ಯಾದವ್ (15), ಶುಭಂ ಹೊಸುರು (15), ಲಕ್ಷ್ಮಣ್ ಡೊಣ್ಣುರ್ (14) ಮೃತ ದುರ್ದೈವಿಗಳು. ಕಳೆದ 25 ರಂದು ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ಸತ್ಯಸಾಯಿ ಪ್ರೇಮನಿಕೇತನ್ ರೆಸಿಡೆನ್ಸಿಯಲ್ ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದರು. 

ಇಂಡಿ ತಾಲೂಕಿನ ಸತ್ಯಸಾಯಿ ಶಾಲೆಯ ಶಿಕ್ಷಕರು ಮಕ್ಕಳನ್ನು ಕರೆದುಕೊಂಡು ಕಮಲಾಪುರದ ಸತ್ಯಸಾಯಿ ಶಾಲೆಗೆ ಬಂದಿದ್ದರು. ಈ ವೇಳೆ ಲಕ್ಮಣ, ಶುಭಂ ಹಾಗೂ ಮಂಜುನಾಥ ಮೂವರು ಸೇರಿ ಶಿಕ್ಷಕರ ಕಣ್ಣು ತಪ್ಪಿಸಿ ಬೆಳಕೋಟಾ ಕೆರೆಗೆ ಈಜಲು ಹೋಗಿದ್ದರು. ಆದರೆ ಮೂವರಲ್ಲಿ ಯಾರಿಗೂ ಸಹ ಈಜು ಬಾರದಿದ್ದರೂ ನೀರಿಗೆ ಇಳಿದು ಮೋಜು ಮಾಡಲು ಮುಂದಾಗಿದ್ದರು. ಈ ವೇಳೆ ಆಳವಾದ ನೀರನ್ನು ಅರಿಯದ ವಿದ್ಯಾರ್ಥಿಗಳು ಈಜಲು ಯತ್ನಿಸಿದ ಪರಿಣಾಮ ಒಬ್ಬರ ನಂತರ ಒಬ್ಬರು ನೀರಿನಲ್ಲಿ ಮುಳುಗಿ  ಸಾವನ್ನಪ್ಪಿದ್ದಾರೆ.

ವಿದ್ಯಾರ್ಥಿಗಳು ನೀರಿನಲ್ಲಿ ಬಿದ್ದಿರುವುದು ಬೆಳಕೋಟಾ ಗ್ರಾಮದ ಜನರ ಗಮನಕ್ಕೆ ಬರುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಹಾಗೂ ಗ್ರಾಮಸ್ಥರು ಬಾಲಕರ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com