ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಲೋಕಸಭೆ ಚುನಾವಣೆ ಇನ್ನೇನು ಕೆಲವೇ ತಿಂಗಳಿರುವ ವೇಳೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಹುಬ್ಬಳ್ಳಿಯಿಂದ ರಾಜ್ಯದಲ್ಲಿ ತಮ್ಮ ಪ್ರಚಾರ ಕಾರ್ಯಕ್ರಮ....

Published: 10th February 2019 12:00 PM  |   Last Updated: 10th February 2019 07:40 AM   |  A+A-


Karnataka: Prime Minister Narendra Modi arrives at Hubli

ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ

Posted By : RHN RHN
Source : ANI
ಹುಬ್ಬಳ್ಳಿ: ಲೋಕಸಭೆ ಚುನಾವಣೆ ಇನ್ನೇನು ಕೆಲವೇ ತಿಂಗಳಿರುವ ವೇಳೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಹುಬ್ಬಳ್ಳಿಯಿಂದ ರಾಜ್ಯದಲ್ಲಿ ತಮ್ಮ ಪ್ರಚಾರ ಕಾರ್ಯಕ್ರಮ ಪ್ರಾರಂಭಿಸಿದ್ದಾರೆ. ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ

ಸಚಿವ ಆರ್‌.ವಿ. ದೇಶಪಾಂಡೆ, ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆ ಮೇಯರ್ ಸೇರಿ ಹಲವರು ಪ್ರಧಾನಿ ಮೋದಿಯನ್ನು ಹುಬ್ಬಳ್ಳಿಗೆ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಹುಬ್ಬಳ್ಳಿ ಮೂಲಕ ಮೋದಿ ಪ್ರಚಾರ ಕಾರ್ಯ ಪ್ರಾರಂಭಿಸುವವರಿದ್ದಾರೆ.

ಹುಬ್ಬಳ್ಳಿಯ ಕೆಎಲ್ ಇ ಮೈದಾನಕ್ಕೆ ಆಗಮಿಸಿದ ಮೋದಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

ಮೋದಿ ಅವರು ಧಾರವಾಡದ ಐಐಟಿ, ಐಐಐಟಿ ಕಟ್ಟಡಗಳಿಗೆ ಶಂಕು ಸ್ಥಾಪನೆ ನೆರವೇರಿಸಿದ್ದಾರೆ. ಅಲ್ಲದೆ ಮನೆ ಮನೆಗೆ ಅಡುಗೆ ಅನಿಲ ಸರಬರಾಜು ಯೋಜನೆಗೆ ಸಹ ಚಾಲನೆ ನೀಡಿದ್ದಾರೆ.

ಪ್ರಧಾನಿ ಚಿಕ್ಕಜಾಜೂರು-ಮಯಕೊಂಡ ರಾಇಲ್ವೆ ಮಾರ್ಗಕ್ಕೆ ಚಾಲನೆ ನೀಡಿದ್ದಾರೆ. 
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp