ಮೈಸೂರು: ಡ್ರಾಪ್ ನೆಪದಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್, ಓರ್ವನ ಬಂಧನ

ಡ್ರಾಪ್ ಕೊಡುವ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಮೈಸೂರಿನ ನಜರಬಾದ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು,...

Published: 12th February 2019 12:00 PM  |   Last Updated: 12th February 2019 04:07 AM   |  A+A-


Gang rape in Mysuru,one accused arrested

ಸಾಂದರ್ಭಿಕ ಚಿತ್ರ

Posted By : LSB LSB
Source : Online Desk
ಮೈಸೂರು: ಡ್ರಾಪ್ ಕೊಡುವ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಮೈಸೂರಿನ ನಜರಬಾದ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಕಳೆದ ಭಾನುವಾರ ಕೊಳ್ಳೇಗಾಲಕ್ಕೆ ತೆರಳುವ ರಸ್ತೆಯ ನಿರ್ಜನ ಪ್ರದೇಶದಲ್ಲಿ ನಿಂತಿದ್ದ ಯುವತಿಗೆ ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದ ನಾಲ್ವರು ಕಾಮುಕರು ಅತ್ಯಾಚಾರ ಎಸಗಿದ್ದಾರೆ. 

ಯುವತಿ ಈ ವಿಷಯವನ್ನು ಮನೆಯವರಿಗೆ ತಿಳಿಸಿದರೂ ಗಂಭೀರವಾಗಿ ಪರಿಗಣಿಸಿಲ್ಲ. ಆದರೆ ಯುವತಿ ನಂತರ ಸ್ನೇಹಿತರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿ, ಪೊಲೀಸರಿಗೆ ದೂರು ನೀಡಿದ್ದಾಳೆ.

ಪ್ರಕರಣವನ್ನು ದಾಖಲಿಸಿಕೊಂಡ ನಜರಬಾದ್ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇತರೆ ಮೂವರಿಗಾಗಿ ಹುಡುಕಾಟ ನಡೆಸಿದ್ದಾರೆ.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp