ಲಾರಿಗೆ ಟೆಂಪೋ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

ರಸ್ತೆ ಬದಿ‌ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಚಾಲಕ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಲಬುರಗಿ: ರಸ್ತೆ ಬದಿ‌ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮಾಡಬೂಳ ಕ್ರಾಸ್‌ ಬಳಿ ನಡೆದಿದೆ.

ಘಟನೆಯಲ್ಲಿ ಟೆಂಪೊ ಚಾಲಕ ದೀಪಕ್ (30) ಮೃತಪಟ್ಟಿದ್ದಾರೆ. ಕ್ಲೀನರ್ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೇಡಂನಿಂದ ಟೆಂಪೋ ಕಲಬುರಗಿಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮಾಡಬೂಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com