ಲೋಕಸಭೆ ಚುನಾವಣೆ ಹಿನ್ನೆಲೆ: ಬ್ರಾಹ್ಮಣ ಸಮುದಾಯದ ಕಲ್ಯಾಣ ನಿಧಿಗೆ 25 ಕೋಟಿ

ಲೋಕಸಭೆ ಚುನಾವಣೆಯನ್ನು ಗಮನದಲ್ಲರಿಸಿಕೊಂಡಿರುವ ರಾಜ್ಯ ಸಮ್ಮಿಶ್ರ ಸರ್ಕಾರ ಬಿಜೆಪಿ ವೋಟ್ ಬ್ಯಾಂಕ್ ಎಂದೇ ಪರಿಗಣಿತವಾಗಿರುವ ಬ್ರಾಹ್ಮಣ ಸಮುದಾಯಕ್ಕೆ ...
ಕೃಷ್ಣ ಭೈರೇಗೌಡ
ಕೃಷ್ಣ ಭೈರೇಗೌಡ
ಬೆಂಗಳೂರು: ಲೋಕಸಭೆ ಚುನಾವಣೆಯನ್ನು ಗಮನದಲ್ಲರಿಸಿಕೊಂಡಿರುವ ರಾಜ್ಯ ಸಮ್ಮಿಶ್ರ ಸರ್ಕಾರ ಬಿಜೆಪಿ ವೋಟ್ ಬ್ಯಾಂಕ್ ಎಂದೇ ಪರಿಗಣಿತವಾಗಿರುವ ಬ್ರಾಹ್ಮಣ ಸಮುದಾಯಕ್ಕೆ ಬಜೆಟ್ ನಲ್ಲಿ 25 ಕೋಟಿ ರು ಅನುದಾನ ನಿಗದಿ ಮಾಡಿದೆ. 
ಕರ್ನಾಟಕ ರಾಜ್ಯ ಬ್ರಾಹ್ಮಣರ ಕಲ್ಯಾಣ ನಿಧಿಗೆ ವಿವಿಧ ಯೋಜನೆಗಳಡಿ  ರಾಜ್ಯ ಸರ್ಕಾರ ಬಜೆಟ್ ನಲ್ಲಿ 25 ಕೋಟಿ ರು ಅನುದಾನ ನೀಡಿದೆ. ವಿದ್ಯಾರ್ಥಿ ವೇತನ, ಸ್ವಯಂ ಉದ್ಯೋಗಕ್ಕಾಗಿ ಕಡಿಮೆ ಬಡ್ಡಿಯಲ್ಲಿ ಸಾಲ, ವಿಧವಾ ವೇತನ, ಹಿರಿಯರಿಗೆ ವೃದ್ದಾಪ್ಯ ವೇತನ, ವಿಕಲ ಚೇತನರಿಗೆ ಅನುದಾನ, ವೃದ್ಧಾಶ್ರಮ, ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನ ನೀಡಲಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
 5 ಎಪಿಎಂಸಿ ಯಾರ್ಡ್ ಗಳ ಅಭಿವೃದ್ಧಿಗಾಗಿ ನಬಾರ್ಡ್ ಅಡಿಯಲ್ಲಿ ಸುಮಾರು 300 ಕೋಟಿ ರು ಅನುದಾನ ನೀಡಲಾಗಿದೆ. ಬಳ್ಳಾರಿ ಸರ್ಕಾರಿ ಕಾಲೇಜಿನ ಬಾಲಕಿಯರ ಮತ್ತು ಬಾಲಕರ ವಸತಿ ನಿಲಯಕ್ಕಾಗಿ 65 ಕೋಟಿ ರು ನೀಡಲಾಗಿದೆ.
ರಾಣೆ ಬೆನ್ನೂರು ಟೌನ್ ಶಿಪ್ ನ ರಸ್ತೆ ಕೆಲಸಕ್ಕಾಗಿ 18 ಕೋಟಿ, ಮೈಸೂರು ಮತ್ತು 92 ಗ್ರಾಮಗಳ ಕುಡಿಯುವ ನೀರಿನ ಯೋಜನೆಗಳಿಗಾಗಿ 340 ಕೋಟಿ ರು ಅನುದಾನ ನೀಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com