ಕರ್ನಾಟಕ ಬಂದ್ ಗೆ ಬದಲಾಗಿ ಕರಾಳ ಕರ್ನಾಟಕ ಆಚರಣೆ

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಸೈನಿಕರ ಮೇಲೆ ಉಗ್ರರು ನಡೆಸಿದ ದಾಳಿ ಖಂಡಿಸಿ ...
ವಾಟಾಳ್ ನಾಗರಾಜ್
ವಾಟಾಳ್ ನಾಗರಾಜ್
ಬೆಂಗಳೂರು: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರು ನಡೆಸಿದ ದಾಳಿ ಖಂಡಿಸಿ ಖಂಡಿಸಿ ಇದೇ ತಿಂಗಳ 19ರಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್​ ನಾಗರಾಜ್ ಕರೆ ನೀಡಿದ್ದ ಬಂದ್ ನ್ನು ಮುಂದೂಡಿದ್ದಾರೆ. ಕರ್ನಾಟಕ ಬಂದ್ ಬದಲಾಗಿ ಕರಾಳ ದಿನ ಆಚರಣೆ ಮಾಡಲು ನಿರ್ಧರಿಸಿದ್ದಾರೆ.
ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಬಂದ್​ಗೆ ಕರೆ ನೀಡಿದ್ದವು. ಇದಕ್ಕೆ ಅನೇಕ ಸಂಘಟನೆಗಳು ಬೆಂಬಲ ನೀಡಿದ್ದವು.  ಆದರೆ, ಕುಂಭಮೇಳ, ಬೆಂಗಳೂರಿನ ಏರ್​ಶೋ, ಧರ್ಮಸ್ಥಳ ಮಹಾಮಸ್ತಕಾಭಿಷೇಕ ನಡೆಯುತ್ತಿದೆ. ಹಾಗಾಗಿ, ಬಂದ್​ ದಿನಾಂಕವನ್ನು ಅವರು ಮುಂದೂಡಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್​​ನಲ್ಲಿ 19ರಂದು ಕಪ್ಪು ಬಟ್ಟೆ ಧರಿಸಿ ಕರಾಳ ದಿನ ಆಚರಣೆ ಮಾಡಲು ನಿರ್ಧರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com