ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣ

ಮಾರ್ಚ್ 1 ರಿಂದ ಆರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಮಾರ್ಚ್ 1 ರಿಂದ ಆರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್ಆರ್ ಟಿಸಿ ಅವಕಾಶ ಕಲ್ಪಿಸಿದೆ.
ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೇ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದ್ದು,  ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ಮುಕ್ತಾಯಗೊಳ್ಳುವ ಮಾರ್ಚ್ 18ರ ವರೆಗೆ  ವಿದ್ಯಾರ್ಥಿಗಳು  ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ವಾಸಸ್ಥಳಕ್ಕೆ ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ. ಪ್ರಕಟಣೆಯಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com