ಕೆಸಿ ವ್ಯಾಲಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರಕ್ಕೆ ಬಿಡುವಂತಿಲ್ಲ: ಸುಪ್ರೀಂ ಕೋರ್ಟ್

ಸಿದ್ದರಾಮಯ್ಯ ಸರ್ಕಾರದ ಮಹತ್ವದ ಯೋಜನೆಯಲ್ಲಿ ಒಂದಾಗಿದ್ದ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆ ನೀರಿನ ಬವಣೆ ನೀಗಿಸುವ ಕೆಸಿ ವ್ಯಾಲಿ ಯೋಜನೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ಕೋಲಾರ/ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಮಹತ್ವದ ಯೋಜನೆಯಲ್ಲಿ ಒಂದಾಗಿದ್ದ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆ ನೀರಿನ ಬವಣೆ ನೀಗಿಸುವ ಕೆಸಿ ವ್ಯಾಲಿ ಯೋಜನೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಕೆಸಿ ವ್ಯಾಲಿ ಹಾಗೂ ಎನ್ ಎಚ್ ವ್ಯಾಲಿಗಳ ನೀರನ್ನು ಕೋಲಾರ, ಚಿಕ್ಕಬಳ್ಳಾಪುರಕ್ಕೆ ಹರಿಸಬಹುದೆಂದು ಕಳೆದ ವರ್ಷ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.ಪಿ ಆಂಜನೇಯ ರೆಡ್ಡಿ ಸಲ್ಲಿಸಿದ ವಿಶೇಷ ಮನವಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರನ್ನೂಳಗೊಂಡ ಪೀಠ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಆದೇಶಿಸಿದೆ.
2018ರ ಜುಲೈ 24ರಂದು ಕೆಸಿ ವ್ಯಾಲಿ ನೀರನ್ನು ಸರಬರಾಜು ಮಾಡಲು ರಾಜ್ಯ ಹೈಕೋರ್ಟ್ ಅನುಮತಿ ನಿರಾಕರಿಸಿತ್ತು. ಇದಾಗಿ ಎರಡು ತಿಂಗಳ ಬಳಿಕ ಹೈಕೋರ್ಟ್ ತನ್ನ ಆದೇಶವನ್ನು ತೆರವುಗೊಳಿಸಿ ಕೋಲಾರ, ಚಿಕ್ಕಬಳ್ಳಾಪುರಕ್ಕೆ ವ್ಯಾಲಿ ನೀರನ್ನು ಹರಿಸಲು ಅನುಮತಿಸಿತ್ತು.ಇದನ್ನು ಪ್ರಶ್ನಿಸಿ  ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. 
ವಿಚಾರಣೆ ನಡೆಸಿದ ಕೋರ್ಟ್ ಆದೇಶಕ್ಕೆ ತಡೆ ನೀಡಿದ್ದಲ್ಲದೆ ಈ ಸಂಬಂಧ ರಾಜ್ಯ ಸರ್ಕಾರ, ಬೆಂಗಳೂರು ಜಲಮಂಡಳಿ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ ತಮ್ಮ ನಿಲುವು ಸ್ಪಷ್ಟಪಡಿಸುವಂತೆ ಸೂಚಿಸಿ ನೋಟೀಸ್ ಜಾರಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com