ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನೆಡೆ, ಸ್ಟೀಲ್ ಬ್ರಿಜ್ ನಿರ್ಮಾಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು ನಗರದಲ್ಲಿ ನಿಮಿಸಲು ಉದ್ದೇಶಿಸಿದ್ದ ಸ್ಟೀಲ್ ಬಿರ್ಡ್ಜ್ ಗೆ ರಾಜ್ಯ ಹೈಕೋರ್ಟ್ ಬುಧವಾರ ಮದ್ಯಂತರ ತಡೆ ನೀಡಿದೆ. ಈ ಮುಖೇನ ರಾಜ್ಯ ಸರ್ಕಾರಕ್ಕೆ ಮತ್ತೆ ಭಾರೀ ಹಿನ್ನಡೆಯಾದಂತಾಗಿದೆ.
ಹೈಕೋರ್ಟ್
ಹೈಕೋರ್ಟ್
ಬೆಂಗಳೂರು: ಬೆಂಗಳೂರು ನಗರದಲ್ಲಿ ನಿಮಿಸಲು ಉದ್ದೇಶಿಸಿದ್ದ ಸ್ಟೀಲ್ ಬಿರ್ಡ್ಜ್ ಗೆ ರಾಜ್ಯ ಹೈಕೋರ್ಟ್ ಬುಧವಾರ ಮದ್ಯಂತರ ತಡೆ ನೀಡಿದೆ. ಈ ಮುಖೇನ ರಾಜ್ಯ ಸರ್ಕಾರಕ್ಕೆ ಮತ್ತೆ ಭಾರೀ ಹಿನ್ನಡೆಯಾದಂತಾಗಿದೆ.
ಕೇಂದ್ರ ಪರಿಸರ ಇಲಾಖೆ ಹಾಗೂ ಇತರೆ ಇಲಾಖೆಗಳ ನಿರಪೇಕ್ಷಣಾ ಪತ್ರ ಬರುವವರೆಗೆ ಕಾಮಗಾರಿ ಕೈಗೊಳ್ಳುವಂತಿಲ್ಲ ಎಂದಿರುವ ಕೋರ್ಟ್ ಮುಂದಿನ ವಿಚಾರಣೆಯನ್ನು ಜೂನ್ ತಿಂಗಳಿಗೆ ಮುಂಡೂಡಿದೆ.
ನಮ್ಮ ಬೆಂಗಳೂರು ಫೌಂಡೇಶನ್  ರಾಜ್ಯ ಸರ್ಕಾರ ನಗರದಲ್ಲಿ ಸ್ಟೀಲ್ ಬಿಡ್ಜ್ ನಿರ್ಮಿಸುವುದನ್ನು ವಿರೋಧಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.ಹಿರಿಯ ವಕೀಲ ವಿಜಯ ಶಂಕರ್ ಫೌಂಡೇಶನ್ ಪರ ನ್ಯಾಯಾಲಯದಲ್ಲಿ ವಾದಿಸಿದ್ದು ಸ್ಟೀಲ್ ಬಿಡ್ಜ್ ನಿರ್ಮಾಣ ಹಸಿರು ಪೀಠದ ತೀರ್ಪಿಉನ ಉಲ್ಲಂಘನೆಯಾಗಲಿದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಬೆಂಗಳೂರಿನ ಚಾಲುಕ್ಯ ವೃತ್ತದಿಂದ ಹೆಬ್ಬಾಳದ ತನಕ ಉಕ್ಕಿನ ಸೇತುವೆ ನಿರ್ಮಾಣ ಮಾಡಲು ಯೋಜಿಸಿದ್ದು  2016ರಲ್ಲಿ ಈ ಯೋಜನೆ ವಿರೋಧಿಸಿ ಫೌಂಡೇಶನ್  ಹಸಿರು ನ್ಯಾಯಪೀಠಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು ಇದರ ವಿಚಾರಣೆ ಅನ್ಡೆಸಿದ್ದ ಸುಪ್ರೀಂ ಕೋರ್ಟ್ ಹಸಿರು ನ್ಯಾಯಪೀಠಸ್ಟೀಲ್ ಬ್ರಿಜ್ ನಿರ್ಮಾಣಕ್ಕೆ ತಡೆಯಾಜ್ಞೆ ನೀಡಿತ್ತು,  ಇದಾಗಿ ಸರ್ಕಾರ ಯೋಜನೆ ಕೈಬಿಟ್ಟಿತ್ತು. ಆದರೆ ಈಗ ಮತ್ತೆ ಯೋಜನೆ ಪ್ರಾರಂಭಕ್ಕೆ ಮುಂದಾಗಿರುವ ಹಿನ್ನೆಲೆ ಫೌಂಡೇಶನ್  ಪುನಃ ಹೈಕೋರ್ಟ್ ನಿಂದ ತಡೆ ತಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com