ಸಿದ್ದರಾಮಯ್ಯ ಬೆಂಗಾವಲು ವಾಹನಗಳ ಡಿಕ್ಕಿ: ಪೊಲೀಸ್​ ಅಧಿಕಾರಿ ಹೃದಯಾಘಾತದಿಂದ ಸಾವು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನಗಳ ಸರಣಿ ಅಪಘಾತದಿಂದ ಆಘಾತಕ್ಕೊಳಗಾಗಿದ್ದ...
ಅಪಘಾತಕ್ಕಿಡಾದ ಕಾರು, ಮರೀಗೌಡ
ಅಪಘಾತಕ್ಕಿಡಾದ ಕಾರು, ಮರೀಗೌಡ
ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನಗಳ ಸರಣಿ ಅಪಘಾತದಿಂದ ಆಘಾತಕ್ಕೊಳಗಾಗಿದ್ದ ಪೊಲೀಸ್​ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಿದ್ದರಾಮಯ್ಯ ಅವರನ್ನು ಹಿಂಬಾಲಿಸುತ್ತಿದ್ದ ಕಾರು ಸೇರಿದಂತೆ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿತ್ತು. 
ಅಪಘಾತದಲ್ಲಿ ಮೂರು ಪೊಲೀಸ್​ ವಾಹನಗಳು ಮತ್ತು ಎರಡು ಖಾಸಗಿ ವಾಹನಗಳು ಜಖಂಗೊಂಡಿದ್ದವು. ಅಪಘಾತದಲ್ಲಿ ಯಾರಿಗೂ ಗಾಯಗಳಾಗಿರಲಿಲ್ಲ. ಆದರೆ ಬೆಂಗಾವಲು ಕಾರಿನಲ್ಲಿದ್ದ ಮಂಡ್ಯ ಡಿಎಆರ್​ನ ಎಆರ್​ಎಸ್​ಐ ಆಗಿದ್ದ ಮರೀಗೌಡ (56) ಅವರು ತೀವ್ರ ಆಘಾತಕ್ಕೊಳಗಾಗಿದ್ದರು. 
ಮರೀಗೌಡ ಅವರು ಸಂಜೆ ಮಂಡ್ಯ ಪೊಲೀಸ್​ ಕ್ವಾಟ್ರಸ್​ ನ ತಮ್ಮ ನಿವಾಸದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.
ಈ ಸಂಬಂಧ  ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com