2019ರ ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) 2019ನೇ ಸಾಲಿನ ಸಾಮಾನ್ಯ ಪ್ರವೇಶ(ಸಿಇಟಿ) ಪರೀಕ್ಷೆಯ ವೇಳಾಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) 2019ನೇ ಸಾಲಿನ ಸಾಮಾನ್ಯ ಪ್ರವೇಶ(ಸಿಇಟಿ) ಪರೀಕ್ಷೆಯ ವೇಳಾಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ.
ಎಂಜಿನಿಯರಿಂಗ್, ಕೃಷಿ, ಪಶು ವೈದ್ಯ ವಿಜ್ಞಾನ ಹಾಗೂ ಅರ್ಕಿಟೆಕ್ಟರ್ ಮತ್ತಿತರ ಕೋರ್ಸ್ ಗಳಿಗೆ ಏಪ್ರಿಲ್ 23, 24 ಮತ್ತು 25ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ.
ಗಡಿನಾಡು ವಿದ್ಯಾರ್ಥಿಗಳಿಗೆ ಏಪ್ರಿಲ್ 25ರಂದು ಸಿಇಟಿ ಬರೆಯಲು ಅವಕಾಶ ನೀಡಲಾಗಿದೆ ಎಂದು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅನಿಲ್ ಕುಮಾರ್ ಅವರು ತಿಳಿಸಿದ್ದಾರೆ.
ನಿನ್ನೆಯಷ್ಟೇ ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಅವರು, ಈ ವರ್ಷದಿಂದ ಆನ್‌ಲೈನ್ ಮೂಲಕ ಸಿಇಟಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದ್ದರು. ಆದರೆ, ಈ ಬಾರಿ ಆನ್‌ಲೈನ್ ಮೂಲಕ ಪರೀಕ್ಷೆಗಳನ್ನು ನಡೆಸಲು ಅಗತ್ಯ ಸೌಲಭ್ಯಗಳು ಇಲ್ಲದ ಹಿನ್ನಲೆಯಲ್ಲಿ ಈಗ ಪರೀಕ್ಷಾ ದಿನಾಂಕ ಘೋಷಣೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com