ಮೋದಿ ಜನಪ್ರಿಯತೆ ಕುಗ್ಗುತ್ತಿರುವ ಹಿನ್ನೆಲೆಯಲ್ಲಿ ಮೇಲ್ವರ್ಗದವರಿಗೆ ಮೀಸಲಾತಿ: ದೇವೇಗೌಡ

ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಕುಗ್ಗುತ್ತಿರುವ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಮೀಸಲಾತಿ ಅಸ್ತ್ರವನ್ನು ಬಳಸಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹೇಳಿದ್ದಾರೆ.
ಎಚ್. ಡಿ. ದೇವೇಗೌಡ
ಎಚ್. ಡಿ. ದೇವೇಗೌಡ

ಹಾಸನ:  ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಕುಗ್ಗುತ್ತಿರುವ  ಹಿನ್ನೆಲೆಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಮೀಸಲಾತಿ  ಅಸ್ತ್ರವನ್ನು ಬಳಸಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಮನೋಭಾವದಿಂದ  ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇ.10 ರಷ್ಟು ಮೀಸಲಾತಿಗೆ ಕೇಂದ್ರಸರ್ಕಾರ ನಿರ್ಧರಿಸಿದೆ. ಇದಕ್ಕೆ ಎಲ್ಲಾ ಪಕ್ಷದವರು ಬೆಂಬಲ ನೀಡಿದ್ದಾರೆ. ಇದು ಸುಪ್ರೀಂಕೋರ್ಟ್ ಗೂ ಹೋಗಿದೆ ಅಲ್ಲಿ ಏನಾಗುತ್ತೋ ಎಂಬುದನ್ನು ನೋಡೋಣ ಎಂದರು.

ಜೆಡಿಎಸ್ ಪಕ್ಷ ಬ್ರಾಹ್ಮಣ ಸಮುದಾಯಕ್ಕೆ ಏನು ಕೊಡಬೇಕೋ ಅದನ್ನು ಕೊಟ್ಟಿದ್ದೇವೆ. ಈ ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು  ಯಾವ ಪ್ರಧಾನಿ ಅಥವಾ ಸಿಎಂ ಕೂಡಾ ಬಗೆಹರಿಸಲು ಸಾಧ್ಯವಿಲ್ಲ ಎಂದು ದೇವೇಗೌಡ ಹೇಳಿದರು.

ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ನೊಂದಿಗೆ ಜೆಡಿಎಸ್ ಮೈತ್ರಿ ಮುಂದುವರೆಯಲಿದೆ. ಆದರೆ, ಸೀಟು ಹಂಚಿಕೆ ಸಂಬಂಧ ಸ್ಪಷ್ಟ ಮಾಹಿತಿ ಇಲ್ಲ. ಈ ಬಗ್ಗೆ ರಾಹುಲ್ ಗಾಂಧಿ, ವೇಣುಗೋಪಾಲ್ ಮತ್ತು ಸಿದ್ದರಾಮಯ್ಯ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಲೋಕಸಭೆ ಚುನಾವಣೆಯಲ್ಲಿನ ತಮ್ಮ ಸ್ಪರ್ಧೆ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ ಎಂದು ದೇವೇಗೌಡರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com