ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿಗೆ ಹಾರಿ ಯುವಕನ ಆತ್ಮಹತ್ಯೆ ಯತ್ನ

ಮೆಟ್ರೋ ರೈಲು ಆಗಮಿಸುತ್ತಿದ್ದಂತೆಯೇ ಹಳಿ ಮೇಲೆ ಹಾರಿ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಮೆಟ್ರೋ ರೈಲು ಆಗಮಿಸುತ್ತಿದ್ದಂತೆಯೇ ಹಳಿ ಮೇಲೆ ಹಾರಿ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ.
ಮೂಲಗಳ ಪ್ರಕಾರ ಬೆಳಗ್ಗೆಯಿಂದ ರೈಲ್ವೇ ನಿಲ್ದಾಣದಲ್ಲೇ ಇದ್ದ ಯುವಕ ರೈಲು ಹಳಿಗೆ ಆಗಮಿಸುತ್ತಿದಂತೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ರೈಲು ಚಾಲಕ ಬ್ರೇಕ್ ಹಾಕಿದ್ದು, ಹಳಿಗೆ ಹಾರಿದ ರಭಸಕ್ಕೆ ಯುವಕನ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು ಪ್ರಸ್ತುತ ಆತನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾರಿದ ಯುವಕ ಯಾರು ಎನ್ನುವ ಮಾಹಿತಿ ಲಭ್ಯವಾಗಿಲ್ಲ.
ಇದೇ ಮೊದಲ ಬಾರಿಗೆ ನಮ್ಮ ಮೆಟ್ರೋ ರೈಲ್ವೇ ನಿಲ್ದಾಣದಲ್ಲಿ ಇಂತಹ ಘಟನೆ ನಡೆದಿದ್ದು, ಇದರಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಾಸ ಉಂಟಾಗಿದೆ. ಯುವಕ ಆತ್ಮಹತ್ಯೆಗೆ ಯತ್ನಿಸಿದ ಬೆನ್ನಲ್ಲೇ ಯಲಚೇನಹಳ್ಳಿ ಕಡೆ ಹೋಗುವ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಕೆ.ಆರ್. ಮಾರುಕಟ್ಟೆಯಲ್ಲಿ ಪ್ರಯಾಣಿಕರನ್ನು ರೈಲಿನಿಂದ ಇಳಿಸಲಾಗಿದೆ. ಅರ್ಧಗಂಟೆಗೂ ಹೆಚ್ಚು ಕಾಲ ಕಾದ ಪ್ರಯಾಣಿಕರು ನಿರಾಸೆಯಿಂದ ತೆರಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com