ಬೆಂಗಳೂರು: ಕಿದ್ವಾಯಿಯಲ್ಲಿ ಅಸ್ಥಿಮಜ್ಜೆ ಕಸಿ ಘಟಕಕ್ಕೆ ಸಿಎಂ ಕುಮಾರಸ್ವಾಮಿ ಶಂಕುಸ್ಥಾಪನೆ

ಬಡ ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ದೇಶದಲ್ಲಿಯೇ ಅತಿ ದೊಡ್ಡ ...

Published: 19th January 2019 12:00 PM  |   Last Updated: 19th January 2019 12:19 PM   |  A+A-


CM H D Kumaraswamy laid foundation stone for bone marrow transplant unit

ಕಿದ್ವಾಯಿ ಆಸ್ಪತ್ರೆ ಆವರಣದಲ್ಲಿ ಅಸ್ಥಿಮಜ್ಜೆ ಕಸಿ ಚಿಕಿತ್ಸಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಹೆಚ್ ಡಿ ಕುಮಾರಸ್ವಾಮಿ

Posted By : SUD SUD
Source : The New Indian Express
ಬೆಂಗಳೂರು: ಬಡ ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ದೇಶದಲ್ಲಿಯೇ ಅತಿ ದೊಡ್ಡ ಅಸ್ಥಿಮಜ್ಜೆ ಕಸಿ ಚಿಕಿತ್ಸಾ ಘಟಕದ (bone marrow transplant) ನಿರ್ಮಾಣಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಶಂಕುಸ್ಥಾಪನೆ ನೆರವೇರಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ 35 ಲಕ್ಷದವರೆಗೆ ವೆಚ್ಚವಾಗುವ ಅಸ್ಥಿಮಜ್ಜೆ ಕಸಿ ಚಿಕಿತ್ಸೆಯು ಈ ಕಟ್ಟಡ ನಿರ್ಮಾಣಗೊಂಡ ನಂತರ ಕಿದ್ವಾಯಿಯಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ಮತ್ತು ಇತರರಿಗೆ ಖಾಸಗಿ ಆಸ್ಪತ್ರೆ ದರದ ಶೇಕಡಾ 50ರಷ್ಟು ಕಡಿಮೆ ದರದಲ್ಲಿ ದೊರೆಯಲಿದೆ.

ಕಿದ್ವಾಯಿ ಆಸ್ಪತ್ರೆಯ ಜಿಂದಾಲ್ ಕೇಂದ್ರದ ನಾಲ್ಕನೇ ಅಂತಸ್ತಿನಲ್ಲಿ ಸುಮಾರು 15 ಸಾವಿರ ಚದರಡಿ ವಿಸ್ತೀರ್ಣದಲ್ಲಿ ಬೋನ್ ಮ್ಯಾರೋ ಟ್ರಾನ್ಸ್ ಪ್ಲೆಂಟೇಷನ್ ಘಟಕ 12 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಘಟಕದಲ್ಲಿ 3 ಕೋಟಿ ರೂಪಾಯಿ ವೆಚ್ಚದಲ್ಲಿ ಯಂತ್ರೋಪಕರಣ ಅಳವಡಿಕೆ ಮಾಡಲಾಗುತ್ತದೆ. ಅಸ್ಥಿಮಜ್ಜೆ ಕಸಿ ಘಟಕದ ಕಟ್ಟಡದಲ್ಲಿ 20 ಪ್ರತ್ಯೇಕ ಹಾಗೂ ಸುಸಜ್ಜಿತ ಕೊಠಡಿ, ಮೂರು ಕಿರು ಶಸ್ತ್ರಚಿಕಿತ್ಸಾ ಘಟಕ, ವೈದ್ಯರ ವಿಶ್ರಾಂತಿ ಕೊಠಡಿ ಇರುತ್ತದೆ. ಸಂಪೂರ್ಣ ಸೋಂಕು ರಹಿತವಾದ ಈ ಕೊಠಡಿಗಳಲ್ಲೇ ರೋಗಿಗೆ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ನಡೆಸಲಾಗುತ್ತದೆ.

ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವವರಿಗೆ ಖಾಸಗಿ ಆಸ್ಪತ್ರೆಯಲ್ಲಿ ದುಬಾರಿ ಹಣ ನೀಡಿ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ.ಮಕ್ಕಳ ಚಿಕಿತ್ಸೆಗಾಗಿ ನೆರವು ಕೋರಿ ಬಹಳಷ್ಟು ಮಂದಿ ತಮ್ಮ ಬಳಿಗೆ ಬರುತ್ತಾರೆ. ಇವುಗಳನ್ನು ಗಮನಿಸಿ ಬಡ ಜನರಿಗೆ ಉಚಿತವಾಗಿ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿರುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.
Stay up to date on all the latest ರಾಜ್ಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp