ವಿದ್ಯುತ್ ಚಾಲಿತ ವಾಹನ ತಯಾರಿಕೆಗೆ ಬೆಂಗಳೂರು ರಾಜಧಾನಿಯಾಗಬೇಕು: ಸಚಿವ ಕೆ.ಜೆ.ಜಾರ್ಜ್

ದೇಶದಲ್ಲಿ ಬೆಂಗಳೂರು ದೇಶದ ಐಟಿ ರಾಜಧಾನಿಯಾಗಿದ್ದು, ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆಗೂ ದೇಶದ ರಾಜಧಾನಿಯಾಗಬೇಕೆಂದು ಮಧ್ಯಮ ಮತ್ತು ಭಾರೀ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಅವರು ಬುಧವಾರ ಹೇಳಿದ್ದಾರೆ...
ಸಚಿವ ಕೆ.ಜೆ.ಜಾರ್ಜ್
ಸಚಿವ ಕೆ.ಜೆ.ಜಾರ್ಜ್
ಬೆಂಗಳೂರು: ದೇಶದಲ್ಲಿ ಬೆಂಗಳೂರು ದೇಶದ ಐಟಿ ರಾಜಧಾನಿಯಾಗಿದ್ದು, ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆಗೂ ದೇಶದ ರಾಜಧಾನಿಯಾಗಬೇಕೆಂದು ಮಧ್ಯಮ ಮತ್ತು ಭಾರೀ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಅವರು ಬುಧವಾರ ಹೇಳಿದ್ದಾರೆ. 
ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ವಿದ್ಯುತ್ ವಾಹನಗಳ ಶೃಂಗಸಭೆ ಉದ್ಘಾಟಿಸಿ ಮಾತನಾಡಿದ ಅವರು. ದೇಶದಾದ್ಯಂತ ಎಲೆಕ್ಟ್ರಿಕ್ ವಾಹನಗಳ ಕ್ಷೇತ್ರಕ್ಕೆ ಸುಮಾರು ರೂ.2 ಲಕ್ಷ ಕೋಟಿ ಹೂಡಿಕೆಯಾಗಿದ್ದು, ವಿಶ್ವದ ಮೂರು ಪ್ರಮುಖ ದೇಶಗಳ ದೇಶಗಳ ಪೈಕಿ ಭಾರತ ಕೂಡ ಒಂದಾಗಿದೆ ಎಂದು ಹೇಳಿದ್ದಾರೆ. 
ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದನೆ ಮಾಡುತ್ತಿರುವ ಕಂಪನಿಗಳು ಮುಂದೆ ಬಂದು ಇಂದು ರಾಜ್ಯದಲ್ಲಿ ರೂ.31,000 ಕೋಟಿ ಹಣವನ್ನು ಹೂಡಿಕೆ ಮಾಡಲು ಮುಂದಾಗಿದೆ. ಇದರಿಂದ 55,000 ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ. ಬೆಂಗಳೂರು ಈಗಾಗಲೇ ದೇಶದ ಐಟಿ ನಗರಗಳಿಗೆ ರಾಜಧಾನಿಯಾಗಿದ್ದು, ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆಯಲ್ಲಿಯೂ ದೇಶದ ರಾಜಧಾನಿಯಾಗಬೇಕೆಂದು ಬಯಸುತ್ತೇನೆ. 
ವಿದ್ಯುತ್ ಚಾಲಿತ ವಾಹನ ಉತ್ಪಾದಿಸುವ ಕಂಪನಿಗಳಿಗೆ ನಮ್ಮ ಸರ್ಕಾರ ಪ್ರೋತ್ಸಾಹ ನೀಡುತ್ತದೆ. ಉತ್ತಮ ವಾತಾವರಣ ಹಾಗೂ ಉತ್ತಮ ಪರಿಸರ ನಿರ್ಮಾಣಕ್ಕೆ ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆ ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದರು.
ನಂತರ ಮಾತನಾಡಿದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಅವರು, ಮುಂದಿನ ದಿನಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ ಯುಗ ಆರಂಬವಾಗಲಿದೆ. ಪರಿಸರ ರಕ್ಷಣೆ, ಆರ್ಥಿಕ ಮಿತವ್ಯಯದಿಂದಾಗಿ ವಿದ್ಯುತ್ ಚಾಲಿತ ವಾಹನಗಳು ಹೆಚ್ಚು ಸೂಕ್ತವಾಗಿದೆ. ಕರ್ನಾಟಕ ಸರ್ಕಾರ ವಿದ್ಯುತ್ ಚಾಲಿತ ವಾಹನಗಳ ನಿಲುಗಡೆ ಸ್ಥಳದಲ್ಲಿ ಶೇ.20 ರಿಂದ 30ರಷ್ಟು ಜಾಗವನ್ನು ಮೀಸಲಿಟ್ಟು, ಅಲ್ಲಿ ಚಾರ್ಜಿಂಗ್ ಪಾಯಿಂಟ್ ಗಳನ್ನು ಅಳವಡಿಸುವ ಚಿಂತನೆ ನಡೆಸುತ್ತಿದೆ. ನಗರಾದ್ಯಂತ 108 ಪ್ರದೇಶಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಪಾಯಿಂಟ್ ಗಳನ್ನು ಸ್ಥಾಪಿಸಲಾಗುತ್ತದೆ. ಚಾರ್ಜಿಂಗ್ ಪಾಯಿಂಟ್ ಗಳನ್ನು ಕಂಡು ಹಿಡಿಯಲು ಮೊಬೈಲ್ ಆ್ಯಪ್ ಕೂಡ ಶೀಘ್ರದಲ್ಲಿಯೇ ಚಾಲನೆಗೆ ತರಲಾಗುತ್ತದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com