ರಸ್ತೆ, ಬಂದರು ಅಭಿವೃದ್ಧಿ, ಆರ್ಥಿಕ ಪ್ರಗತಿಯತ್ತ ಹೆಗಡೆ ಗಮನ

ಫೈರ್ ಬ್ರಾಂಡ್ , ಹಿಂದೂತ್ವ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ದೊರೆಯದಿದ್ದರೂ ತಮ್ಮ ಸಿದ್ದಾಂತ ಹಾಗೂ ಅಭಿವೃದ್ಧಿಯಲ್ಲಿ ಉತ್ಸಾಹವನ್ನು ಕಳೆದುಕೊಂಡಿಲ್ಲ.
ಅನಂತ್ ಕುಮಾರ್ ಹೆಗಡೆ
ಅನಂತ್ ಕುಮಾರ್ ಹೆಗಡೆ
ಕಾರವಾರ: ಫೈರ್ ಬ್ರಾಂಡ್, ಹಿಂದೂತ್ವ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ದೊರೆಯದಿದ್ದರೂ ತಮ್ಮ ಸಿದ್ದಾಂತ ಹಾಗೂ ಅಭಿವೃದ್ಧಿಯಲ್ಲಿ ಉತ್ಸಾಹವನ್ನು ಕಳೆದುಕೊಂಡಿಲ್ಲ.
ರಾಜ್ಯದಲ್ಲಿಯೇ ಅತಿ ಹೆಚ್ಚು 4 ಲಕ್ಷದ 79 ಸಾವಿರದ 649 ಮತಗಳ ಅಂತರದಿಂದ  ಹೆಗಡೆ ಗೆದಿದ್ದರೂ  ನಾಥೂರಾಮ್ ಗೋಡ್ಸೆ ಕುರಿತ ವಿವಾದಾತ್ಮಕ ಟ್ವೀಟ್ ನಿಂದ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ  ಅವಕಾಶ ಸಿಗದಂತಾಗಿದೆ.
ಹೆಗಡೆ ಈಗ ಜಿಲ್ಲೆಯಲ್ಲಿ ರಸ್ತೆ ಅಭಿವೃದ್ಧಿ ಯೋಜನೆಯತ್ತ ಗಮನ ಹರಿಸಿದ್ದು, ಆದಷ್ಟು ಬೇಗ ಪೂರ್ಣಗೊಳಿಸುವ ಭರವಸೆ ಹೊಂದಿದ್ದಾರೆ. ಜಿಲ್ಲೆಯ ಆರ್ಥಿಕ ಪ್ರಗತಿ ಹೆಚ್ಚಿಸುವ ನಿಟ್ಟಿನಲ್ಲಿ ರಸ್ತೆ ಹಾಗೂ ಬಂದರು ಅಭಿವೃದ್ಧಿ ಕಾಮಗಾರಿಗಳ ವೇಗವನ್ನು ಹೆಚ್ಚಿಸುವಂತೆ ಭಾರತೀಯ  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ  ಬಂದರು ಪ್ರಾಧಿಕಾರದ ಅಧಿಕಾರಿಗಳಿಗೆ ಒತ್ತಡ ಹಾಕುತ್ತಿದ್ದಾರೆ. 
ಹಿಂದಿನ ಸರ್ಕಾರದಲ್ಲಿ ಕೌಶಾಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ರಾಜ್ಯ ಖಾತೆ ಸಚಿವರಾಗಿ ಕೆಲಸ ಮಾಡಿದ್ದ ಅನಂತ್ ಕುಮಾರ್ ಹೆಗಡೆ, ಕಳೆದ ಎರಡು ದಶಕಗಳಲ್ಲಿ ಏಳು ಲೋಕಸಭಾ ಚುನಾವಣೆಗಳಲ್ಲಿ ಆರು ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದಾರೆ. ಅವರ ತತ್ವ ಸಿದ್ದಾಂತಗಳು ಕರಾವಳಿ ಜಿಲ್ಲೆಯಲ್ಲಿ ಬಿಜೆಪಿಯನ್ನು ಪ್ರಬಲಗೊಳಿಸಲು ನೆರವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. 
 ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ತನ್ನ ಸಮೀಪದ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ವಿರುದ್ಧ 7 ಲಕ್ಷದ 86 ಸಾವಿರದ 042 ಮತಗಳನ್ನು ಹೆಗಡೆ ಪಡೆದಿದ್ದರು.  2014ರ ಚುನಾವಣೆಯಲ್ಲಿ ಕಂದಾಯ ಸಚಿವ ಆರ್ ವಿ ದೇಶಪಾಂಡೆ ಅವರ ಪುತ್ರನ ವಿರುದ್ಧ ಗೆಲುವು ಸಾಧಿಸಿದ್ದರು. 1996ರವರಗೂ ಕಾಂಗ್ರೆಸ್ ಹಿಡಿತದಲ್ಲಿ ಈ ಕ್ಷೇತ್ರದಲ್ಲಿ ಭಟ್ಕಳ ಶಾಸಕ ಡಾ ಯು. ಚಿತ್ತರಂಜನ್ ಅವರ ಹತ್ಯೆ ನಂತರ ಹೆಗಡೆ ನಾಯಕರಾಗಿ ರೂಪುಗೊಂಡರು. 
ಹುಬ್ಬಳ್ಳಿ ಈದ್ಗಾ ಮೈದಾನ ವಿವಾದ ಸಂದರ್ಭದಲ್ಲಿ ಬೆಳಕಿಗೆ ಬಂದ ಅನಂತ್ ಕುಮಾರ್ ಹೆಗಡೆ ಅವರಿಗೆ 1996ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಿತ್ತು. ಬಿಜೆಪಿಯಲ್ಲಿ ಫೈರ್ ಬ್ರಾಂಡ್ ಎಂದೇ ಖ್ಯಾತಿಯಾಗಿರುವ ಹೆಗಡೆ ತನ್ನ ಭಾಷಣದಿಂದಲೇ ವಿವಾದಕ್ಕೆ ಗುರಿಯಾಗುತ್ತಿದ್ದಾರೆ. ಚುನಾವಣೆಗೂ ಮುನ್ನ ರಾಹುಲ್ ಗಾಂಧಿ ವಿರುದ್ಧ ಮಾಡಿದ್ದ ಟೀಕೆಗಳಿಗೆ  ಪರ ಹಾಗೂ ವಿರುದ್ಧ ಅಭಿಪ್ರಾಯಗಳು ವ್ಯಕ್ತವಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com