ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ‌ ದಾಖಲು

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ...

Published: 06th July 2019 12:00 PM  |   Last Updated: 06th July 2019 01:03 AM   |  A+A-


Kagodu Thimmappa in Shivamogga hospital

ಶಿವಮೊಗ್ಗ ಆಸ್ಪತ್ರೆಯಲ್ಲಿ ಕಾಗೋಡು ತಿಮ್ಮಪ್ಪ (ಸಂಗ್ರಹ ಚಿತ್ರ)

Posted By : SUD SUD
Source : UNI
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಕಾಗೋಡು ಅವರು ಹೆಚ್ಚಿನ ಚಿಕಿತ್ಸೆಗಾಗಿ ಶನಿವಾರ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗುರುವಾರ ರಾತ್ರಿ ಸಾಗರದ ತಮ್ಮ ನಿವಾಸದಲ್ಲಿ ತೀವ್ರ ಅಸ್ವಸ್ಥರಾದ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ನಂತರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡು ಬಂದಿದ್ದರಿಂದ ಅವರನ್ನು ಐಸಿಯುನಿಂದ ವಿಶೇಷ ವಾರ್ಡ್ ಗೆ ದಾಖಲಿಸಲಾಗಿತ್ತು. ಈಗ ಹೆಚ್ಚಿನ ಚಿಕಿತ್ಸೆಗಾಗಿ ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಅಧಿಕ ರಕ್ತದೊತ್ತಡ ಹಾಗೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಅವರು ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp