ಬಾಗಲಕೋಟೆ: ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ

ಹಾಸ್ಟೆಲ್ ನ ನಾಲ್ಕನೇ ಅಂತಸ್ಥಿನಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ನಡೆದಿದೆ.

Published: 10th July 2019 12:00 PM  |   Last Updated: 10th July 2019 12:50 PM   |  A+A-


Student jump from hostel building to commit suicide at Bagalkot

ಬಾಗಲಕೋಟೆ: ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ

Posted By : RHN RHN
Source : Online Desk
ಬಾಗಲಕೋಟೆ: ಹಾಸ್ಟೆಲ್ ನ ನಾಲ್ಕನೇ ಅಂತಸ್ಥಿನಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ನಡೆದಿದೆ.

ಮಂಗಳವಾರ ರಾತ್ರಿ ನಡೆದ ಘಟನೆಯಲ್ಲಿ ಪ್ರಿಯಾಂಕಾ ಮೇತ್ರಿ(17)  ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ  ಜಮಖಂಡಿಯ ರಾಯಲ್ ಪ್ಯಾಲೆಸ್ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದಳು.

ಮಂಗಳವಾರ ರಾತ್ರಿ ತನ್ನೆಲ್ಲಾ ಸ್ನೇಹಿತರು ಮಲಗಿದ ತರುವಾಯ ರಾಯಲ್ ಪ್ಯಾಲೇಸ್ ಕಾಲೇಜ್ ಹಾಸ್ಟೆಲ್ ನ ಕಟ್ಟಡದಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದವಳಾಗಿದ್ದ ಪ್ರಿಯಾಂಕಾ ಸಾವಿಗೆ ನಿಖರ ಕಾರಣ ತಿಳಿದಿಲ್ಲ. ವಿಷಯ ತಿಳಿದ ಪೋಷಕರು ಸ್ಥಳಕ್ಕೆ ಧಾವಿಸಿದ್ದು ಮಗಳ ಸಾವಿನ ಕಾರಣ ತಿಳಿಯುವವರೆಗೆ ಮೃತದೇಹದ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡಲ್ಲ ಎಂದು ಪ್ರತಿಭಟನೆ ನಡೆಸಿದ್ದಾರೆ.

ಘಟನೆ ಕುರಿತಂತೆ ಜಮಖಂಡಿ ನಗರಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp