ಭ್ರಷ್ಟಾಚಾರ ನಿಗ್ರಹ ದಳದ ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ

ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ಹೇಮಂತ್ ನಿಂಬಾಳ್ಕರ್
ಹೇಮಂತ್ ನಿಂಬಾಳ್ಕರ್
ಬೆಂಗಳೂರು: ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ಐಜಿಪಿ ಎಂ.ಚಂದ್ರಶೇಖರ್ ಅವರು ಹೇಮಂತ್ ನಿಂಬಾಳ್ಕರ್‌ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಈ ಹಿಂದೆ ಹೇಮಂತ್ ನಿಂಬಾಳ್ಕರ್ ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಐಜಿಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್​ ಅವರು ತಮ್ಮ ಶಾಸಕಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಬಲವಾಗಿ ಹಬ್ಬಿರುವ ಬೆನ್ನಲ್ಲೇ ಬುಧವಾರ ರಾಜ್ಯ ಸರ್ಕಾರ ಅವರ ಪತಿ ಹೇಮಂತ್ ನಿಂಬಾಳ್ಕರ್ ಅವರನ್ನು ಐಜಿಪಿ ಹುದ್ದೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com