ಬಿಬಿಎಂಪಿ ವಿಭಜನೆ ಮಸೂದೆ ಹಿಂಪಡೆಯಲು ಸರ್ಕಾರ ನಿರ್ಧಾರ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವಿಭಜನೆ ಉದ್ದೇಶದಿಂದ ರೂಪಿಸಿದ್ದ 'ಕರ್ನಾಟಕ ಮುನ್ಸಿಪಲ್ ಕಾರ್ಪೋರೇಷನ್ಸ್ ಕಾಯಿದೆ...

Published: 11th July 2019 12:00 PM  |   Last Updated: 11th July 2019 10:07 AM   |  A+A-


Karnataka Govt decides to withdraw BBMP split bill

ಬಿಬಿಎಂಪಿ

Posted By : LSB LSB
Source : UNI
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವಿಭಜನೆ ಉದ್ದೇಶದಿಂದ ರೂಪಿಸಿದ್ದ 'ಕರ್ನಾಟಕ ಮುನ್ಸಿಪಲ್ ಕಾರ್ಪೋರೇಷನ್ಸ್ ಕಾಯಿದೆ-2015 ' ಅನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಅವರು, ಬಿಬಿಎಂಪಿಯನ್ನು ಮೂರು ಭಾಗಗಳಾಗಿ ವಿಭಜಿಸುವ ಸಂಬಂಧ ಮಸೂದೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿ 3 ವರ್ಷಗಳಾದರೂ ಇದೂವರೆಗೆ ಕೇಂದ್ರ ಅನುಮತಿ ನೀಡಿಲ್ಲ. ಹೀಗಾಗಿ ಮಸೂದೆಯನ್ನು ಹಿಂಪಡೆದು ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಮಂಡಿಸಿ ಜಾರಿಗೆ ತರಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

2013 ರಲ್ಲಿ ಕಾಂಗ್ರೆಸ್, ಸುಗಮ ಆಡಳಿತದ ದೃಷ್ಟಿಯಿಂದ ಪಾಲಿಕೆಯನ್ನು ವಿಭಜಿಸುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಅದರಂತೆ 2015 ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಬಿಎಂಪಿ ವಿಭಜನೆ ಮಸೂದೆ ಮಂಡಿಸಿ ಅಂಗೀಕರಿಸಿತ್ತು.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp