ಎಚ್ ಎಸ್ ದೊರೆಸ್ವಾಮಿ, ಸಿ ಚಂದ್ರಶೇಖರ್, ಟಿ ಎನ್ ಕೃಷನ್ ಅವರಿಗೆ ರಾಷ್ಟ್ರೀಯ ಪ್ರಶಸ್ತಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2018 ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಲಲಿತಕಲೆ ಹಾಗೂ ಜಕಣಾಚಾರಿ ಪ್ರಶಸ್ತಿಗಳಿಗೆ ಭಾಜನರಾದ ಸಾಧಕರ ಅನುಮೋದನೆ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ಗುರುವಾರ ಬಿಡುಗಡೆಗೊಳಿಸಿದ್ದಾರೆ.
ಎಚ್ ಎಸ್ ದೊರೆಸ್ವಾಮಿ, ಸಿ ಚಂದ್ರಶೇಖರ್, ಟಿ ಎನ್ ಕೃಷನ್ ಅವರಿಗೆ ರಾಷ್ಟ್ರೀಯ ಪ್ರಶಸ್ತಿ
ಎಚ್ ಎಸ್ ದೊರೆಸ್ವಾಮಿ, ಸಿ ಚಂದ್ರಶೇಖರ್, ಟಿ ಎನ್ ಕೃಷನ್ ಅವರಿಗೆ ರಾಷ್ಟ್ರೀಯ ಪ್ರಶಸ್ತಿ
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2018 ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಲಲಿತಕಲೆ ಹಾಗೂ ಜಕಣಾಚಾರಿ ಪ್ರಶಸ್ತಿಗಳಿಗೆ ಭಾಜನರಾದ ಸಾಧಕರ ಅನುಮೋದನೆ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ಗುರುವಾರ ಬಿಡುಗಡೆಗೊಳಿಸಿದ್ದಾರೆ.
ಕರ್ನಾಟಕ ಸಂಗೀತ ವಾದ್ಯ ಕ್ಷೇತ್ರದಲ್ಲಿ ಗಣನೀಯ ಸಲ್ಲಿಸಿದಕ್ಕಾಗಿ ಚೆನ್ನೈನ ಟಿ.ಎನ್.ಕೃಷ್ಣನ್ ಅವರಿಗೆ ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ, ಗಾಂಧಿವಾದಿ ಹಾಗೂ ಹೋರಾಟಗಾರರಾದ ಬೆಂಗಳೂರಿನ ಹೆಚ್.ಎಸ್.ದೊರೆಸ್ವಾಮಿ ಅವರಿಗೆ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿ, ಅಹಿಂಸಾತತ್ವ ಪಾಲನೆ ಹಾಗೂ ಸಮಾಜ ಸೇವೆಗಾಗಿ ಹಾವೇರಿಯ ಚನ್ನಮ್ಮ ಹಳ್ಳಿಕೇರಿ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಡಾ.ಗುಬ್ಬಿವೀರಣ್ಣ ಪ್ರಶಸ್ತಿಗೆ ಬಾಗಲಕೋಟೆಯ ಪ್ರಕಾಶ್ ಕಡಪಟ್ಟಿ, ಜಾನಪದ ಶ್ರೀ ಪ್ರಶಸ್ತಿಗೆ ಬೀದರ್ ನ ಚಂದ್ರಶಾ ತಮ್ಮಣ್ಣಪ್ಪ ಮಾಳಗೆ ಹಾಗೂ ಮೈಸೂರಿನ ಹಿಣಕಲ್ ಮಹದೇವಯ್ಯ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿಗೆ ಬೆಂಗಳೂರಿನ ಸಿ.ಚಂದ್ರಶೇಖರ್ ಹಾಗೂ ಜಕಣಾಚಾರಿ ಪ್ರಶಸ್ತಿಗೆ ಉಡುಪಿಯ ಲಕ್ಷ್ಮೀನಾರಾಯಣ ಆಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com