ಇಂದಿನಿಂದ ವಿಧಾನಸಭೆ ಕಲಾಪ: ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ವಿಪ್ ಜಾರಿ

ಕರ್ನಾಟಕ ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿರುವಂತೆಯೇ ಇತ್ತ ಇಂದಿನಿಂದ ವಿಧಾನಸೌಧದಲ್ಲಿ ಮುಂಗಾರು ಅಧಿವೇಶನ ಆರಂಭಗೊಳ್ಳುತ್ತಿದ್ದು, ದೋಸ್ತಿ ಸರ್ಕಾರದ ಭಾಗಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಶಾಸಕರಿಗೆ ಕಡ್ಡಾಯವಾಗಿ ಕಲಾಪಕ್ಕೆ ಹಾಜರಾಗುವಂತೆ ವಿಪ್ ಜಾರಿ ಮಾಡಿವೆ.

Published: 12th July 2019 12:00 PM  |   Last Updated: 12th July 2019 10:32 AM   |  A+A-


JDS, Congress issue whip to MLAs to attend Monsoon Session of Assembly on Friday

ಸಂಗ್ರಹ ಚಿತ್ರ

Posted By : SVN SVN
Source : Online Desk
ಬೆಂಗಳೂರು: ಕರ್ನಾಟಕ ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿರುವಂತೆಯೇ ಇತ್ತ ಇಂದಿನಿಂದ ವಿಧಾನಸೌಧದಲ್ಲಿ ಮುಂಗಾರು ಅಧಿವೇಶನ ಆರಂಭಗೊಳ್ಳುತ್ತಿದ್ದು, ದೋಸ್ತಿ ಸರ್ಕಾರದ ಭಾಗಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಶಾಸಕರಿಗೆ ಕಡ್ಡಾಯವಾಗಿ ಕಲಾಪಕ್ಕೆ ಹಾಜರಾಗುವಂತೆ ವಿಪ್ ಜಾರಿ ಮಾಡಿವೆ.

ಅತೃಪ್ತ ಶಾಸಕರ ರಾಜೀನಾಮೆ ಕುರಿತ ನಿರ್ಧಾರ ಇತ್ಯರ್ಥಗೊಳ್ಳದಿರುವ ಮಧ್ಯೆಯೇ ಇಂದಿನಿಂದ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಆರಂಭವಾಗಲಿದ್ದು, ಆಡಳಿತಾರೂಢ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರಿಗೆ ವಿಪ್‌ ಜಾರಿಗೊಳಿಸಲಾಗಿದೆ. ಶಾಸಕರು ಶುಕ್ರವಾರದಿಂದ ಈ ತಿಂಗಳ 26ರವರೆಗೆ ನಡೆಯುವ ಪ್ರತಿದಿನದ ಕಲಾಪದಲ್ಲಿ ಕಡ್ಡಾಯವಾಗಿ ಉಪಸ್ಥಿತರಿದ್ದು, ಅಲ್ಲಿ ಮಂಡನೆಯಾಗುವ ವಿತ್ತೀಯ ವಿಧೇಯಕಗಳು, ಶಾಸನಗಳು ಮತ್ತು ಇತರ ಕಾರ್ಯಕಲಾಪಗಳಲ್ಲಿ ಭಾಗವಹಿಸಿ ಸರ್ಕಾರದ ಪರ ಕಡ್ಡಾಯವಾಗಿ ಮತ ಚಲಾಯಿಸುವಂತೆ ವಿಪ್ ನಲ್ಲಿ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ಸರ್ಕಾರಕ್ಕೆ ಬಂಡಾಯದ ಬಿಸಿ ಜೋರಾಗಿಯೇ ತಟ್ಟಿದ್ದು, ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಒಟ್ಟು 16 ಶಾಸಕರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆ ಇನ್ನೂ ಅಂಗೀಕಾರಗೊಂಡಿಲ್ಲ. ಹೀಗಾಗಿ, ತಾವು ರಾಜೀನಾಮೆ ನೀಡಿದ್ದರೂ, ರಾಜಿನಾಮೆ ಅಂಗೀಕಾರಗೊಳ್ಳದ ಕಾರಣ, ಅತೃಪ್ತ ಶಾಸಕರು ಗೊಂದಲಕ್ಕೆ ಸಿಲುಕಿದ್ದಾರೆ. ರಾಜಿನಾಮೆ ನೀಡಿರುವುದರಿಂದ ಅಧಿವೇಶನದ ಕಲಾಪದಿಂದ ದೂರ ಉಳಿಯಬೇಕೊ ಅಥವಾ ವಿಪ್‌ ಉಲ್ಲಂಘನೆಯ ಕ್ರಮಕ್ಕೆ ಹೆದರಿ ಸದನಕ್ಕೆ ಆಗಮಿಸಬೇಕೊ ಎಂಬ ಗೊಂದಲ ಉಂಟಾಗಿದೆ.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp