ಐಎಂಎ ವಂಚನೆ ಪ್ರಕರಣ: ಹೂಡಿಕೆದಾರರ ಮೇಲೆ ಪ್ರಭಾವ ಬೀರಲು ಹಣ ಪಡೆದಿದ್ದ ಮೌಲ್ವಿ ಬಂಧನ!

ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಮಾಡಿದ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು ಇದೀಗ ಹೂಡಿಕೆದಾರರ ಮೇಲೆ ಪ್ರಭಾವ ಬೀರಲು ಮನ್ಸೂರ್ ಅಲಿಖಾನ್ ರಿಂದ ಹಣ ಪಡೆದಿದ್ದ ಆರೋಪದ ಮೇರೆಗೆ ಮುಸ್ಲಿಮ್ ಧರ್ಮ ಗುರುವೊಬ್ಬರನ್ನು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಮಾಡಿದ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು ಇದೀಗ ಹೂಡಿಕೆದಾರರ ಮೇಲೆ ಪ್ರಭಾವ ಬೀರಲು ಮನ್ಸೂರ್ ಅಲಿಖಾನ್ ರಿಂದ ಹಣ ಪಡೆದಿದ್ದ ಆರೋಪದ ಮೇರೆಗೆ ಮುಸ್ಲಿಮ್ ಧರ್ಮ ಗುರುವೊಬ್ಬರನ್ನು ಬಂಧಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ ಶಿವಾಜಿನಗರದ ಓಪಿಎಚ್‌ ರಸ್ತೆಯಲ್ಲಿ ಬೇಪಾರಿಯನ್‌ ಮಸೀದಿ ಧರ್ಮಗುರು ಹನೀಫ್‌ ಅಫ್ಸರ್‌ ಅಜೀಜ್‌ ರನ್ನು ಅಧಿಕಾರಿಗಳು ಬಂಧಿಸಿದ್ದು, ಹೂಡಿಕೆದಾರರ ಮೇಲೆ ಪ್ರಭಾವ ಬೀರಲು ಈತ ಬರೊಬ್ಬರಿ 3 ಕೋಟಿ ಮೌಲ್ಯದ ಮನೆ ಉಡುಗೊರೆ ಪಡೆದಿದ್ದ ಎನ್ನಲಾಗಿದೆ. ಅಂತೆಯೇ ಐಎಂಎ ಸಂಸ್ಥೆ ನಿರ್ದೇಶಕರ ವಿಚಾರಣೆ ವೇಳೆ ಧರ್ಮಗುರುವಿಗೆ 2017ರಲ್ಲಿ ಎಚ್ಎಸ್ಆರ್‌ ಲೇಔಟ್ ನಲ್ಲಿ ಮೂರು ಕೋಟಿ ಮೌಲ್ಯದ ಐಶಾರಾಮಿ ಮನೆಯನ್ನು ಉಡುಗೊರೆಯಾಗಿ ನೀಡಿದ್ದ ವಿಚಾರ ಕೂಡ ಇದೀಗ ಬಯಲಾಗಿದೆ. 
ವಿಚಾರಣೆ ವೇಳೆ ಈ ಮಾಹಿತಿಯನ್ನು ಸಂಗ್ರಹಿಸಿದ ಅಧಿಕಾರಿಗಳು ಮೌಲ್ವಿ ಅವರನ್ನು ನಿನ್ನೆ ಬೆಳಗ್ಗೆ ವಶಕ್ಕೆ ಪಡೆದಿದ್ದಾರೆ. ಬಳಿಕ ಸಂಜೆ ವೇಳೆಗೆ ಬಂಧನ ಪ್ರಕ್ರಿಯೆಯನ್ನು ಅಧಿಕೃತಗೊಳಿಸಿದ್ದಾರೆ.
ಈ ಧರ್ಮ ಗುರು ಮಾತು ಕೇಳಿ ಸಾವಿರಾರು ಮಂದಿ ಅಮಾಯಕರು ಐಎಂಎನಲ್ಲಿ ಹೂಡಿಕೆ ಮಾಡಿದ್ದರು. ಜನ ಸಮಾನ್ಯರ ಧಾರ್ಮಿಕ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡು ಐಎಂಎ ಸಂಸ್ಥೆಯಲ್ಲಿ ಸಹಕರಿಸಿದ ಆರೋಪದ ಮೇರೆಗೆ ಹನೀಫ್‌ ಅವರನ್ನು ಬಂಧಿಸಲಾಗಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಡಿಸಿಪಿ ಎಸ್‌.ಗಿರೀಶ್‌ ತಿಳಿಸಿದ್ದಾರೆ.
ಈ ಹಿಂದೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿಖಾನ್ ಕೂಡ ಈ ಹಿಂದೆ ಬಿಡುಗಡೆಗೊಳಿಸಿದ್ದ ಆಡಿಯೋ ಮತ್ತು ವಿಡಿಯೋ ಹೇಳಿಕೆಗಳಲ್ಲಿ ತನ್ನಿಂದ ಧಾರ್ಮಿಕ ಗುರುಗಳು ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿದ್ದ. ಈ ಸಂಬಂಧವೂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com