ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಡ್ಯ: ವಿಷ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥ ಘಟನೆ ಅಮಾನವೀಯ- ಸುಮಲತಾ ಅಂಬರೀಷ್

ಚಾಮರಾಜನಗರ ಜಿಲ್ಲೆಯ ಜಿಲ್ಲೆಯ ಸುಳ್ವಾಡಿ ಗ್ರಾಮದಲ್ಲಿ ದೇವರ ಪ್ರಸಾದ ಸೇವಿಸಿ 15ಕ್ಕೂ ಹೆಚ್ಚು ಮಂದಿ ಅಸುನೀಗಿದ್ದರು. ಈ ದುರಂತ ಮಾಸುವ ಮುನ್ನವೇ ವಿಷ ಪೂರಿತ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಮಂಡ್ಯ ತಾಲೂಕಿನ ಎ. ಹುಲ್ಲುಕರೆ ಗ್ರಾಮದಲ್ಲಿ ನಡೆದಿದೆ.
ಮಂಡ್ಯ: ಚಾಮರಾಜನಗರ ಜಿಲ್ಲೆಯ ಜಿಲ್ಲೆಯ ಸುಳ್ವಾಡಿ ಗ್ರಾಮದಲ್ಲಿ ದೇವರ ಪ್ರಸಾದ ಸೇವಿಸಿ 15ಕ್ಕೂ ಹೆಚ್ಚು ಮಂದಿ ಅಸುನೀಗಿದ್ದರು. ಈ ದುರಂತ ಮಾಸುವ ಮುನ್ನವೇ ವಿಷ ಪೂರಿತ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಮಂಡ್ಯ ತಾಲೂಕಿನ ಎ. ಹುಲ್ಲುಕರೆ ಗ್ರಾಮದಲ್ಲಿ ನಡೆದಿದೆ.
ಮಂಡ್ಯದಿಂದ ಏಳು ಕಿಲೋ ಮೀಟರ್ ದೂರದಲ್ಲಿರುವ ಹುಲ್ಲುಕೆರೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಟ್ಯಾಂಕರ್ ನಿಂದ ನೀರು ಸೇವಿಸಿದ ವಿದ್ಯಾರ್ಥಿಗಳಿಗೆ  ಹೊಟ್ಟೆ ನೋವು ಹಾಗೂ ವಾಂತಿ ಕಾಣಿಸಿಕೊಂಡಿದೆ. ನಂತರ  ಶಿಕ್ಷಕರು ಕೊತತ್ತಿ ಆರೋಗ್ಯ ಕೇಂದ್ರದಲ್ಲಿ  ತದನಂತರ ಮಂಡ್ಯದಲ್ಲಿನ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ  ಚಿಕಿತ್ಸೆ ಕೊಡಿಸಿದ್ದಾರೆ ಎಂದು ಎಸ್ಪಿ ಶಿವ ಪ್ರಕಾಶ್ ದೇವರಾಜ್ ತಿಳಿಸಿದ್ದಾರೆ.
ಶಾಲೆಯ ಪ್ರಿಂಶುಪಾಲರ ವಿರುದ್ಧ ದ್ವೇಷ ತೀರಿಸಿಕೊಳ್ಳುವ ಸಲುವಾಗಿ ದುಷ್ಕರ್ಮಿಗಳು ಟ್ಯಾಂಕರ್ ನೀರಿಗೆ ವಿಷ ಮಿಶ್ರಣ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಈ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಂಸದೆ ಸುಮಲತಾ ಅಂಬರೀಷ್ ,ಶಾಲಾ ಮಕ್ಕಳ ಕುಡಿಯುವ ನೀರಿನ ಟ್ಯಾಂಕ್ ಗೆ ಕ್ರಿಮಿನಾಶಕ ಮಿಶ್ರಣ ಮಾಡಿರುವುದು ಆಘಾತಕಾರಿ ಅಮಾನವೀಯವಾದದ್ದು  ಎಂದಿದ್ದಾರೆ. 
ಪೊಲೀಸ್ ಇಲಾಖೆ ಕೂಡಲೇ ಮಕ್ಕಳ ಜೀವನಕ್ಕೆ ಮುಳುವಾಗುವಂತಹ ಕೃತ್ಯಕ್ಕೆ ಕೈ ಹಾಕಿದವರನ್ನು ಪತ್ತೆ ಹಚ್ಚಿ , ಕಾನೂನಿನಡಿ ಸೂಕ್ತ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com