ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಲಾರಿ-ಕಾರು ಡಿಕ್ಕಿ, ಮೂರು ಮಹಿಳೆಯರು ಸೇರಿ 5 ಸಾವು

ಲಾರಿ ಹಾಗೂ ಇನ್ನೋವಾ ಕಾರಿನ ನಡುವೆ ಸಂಬವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ 5 ಮಂದಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

Published: 17th July 2019 12:00 PM  |   Last Updated: 17th July 2019 07:56 AM   |  A+A-


5 killed after drastic accident in Chitradurga

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಲಾರಿ-ಕಾರು ಡಿಕ್ಕಿ, ಮೂರು ಮಹಿಳೆಯರು ಸೇರಿ 5 ಸಾವು

Posted By : RHN RHN
Source : Online Desk
ಚಿತ್ರದುರ್ಗ: ಲಾರಿ ಹಾಗೂ ಇನ್ನೋವಾ ಕಾರಿನ ನಡುವೆ ಸಂಬವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ 5 ಮಂದಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ-4ರ ಕುಂಚಿಗನಾಳು ಗ್ರಾಮದಲ್ಲಿ ಸಂಭವಿಸಿದ ಈ ದುರ್ಘಟನೆಯಲ್ಲಿ ಐವರು ಮೃತಪಟ್ಟು ಇನ್ನೂ ಮೂವರುಗಂಭೀರ ಗಾಯಗೊಂಡಿದ್ದಾರೆ.

ಕಾರಿನಲ್ಲಿ  ಅಶೋಕ್, ಪ್ರವಿತಾ, ಮಂಜುಳಾ, ಶೋಭಾ, ಸುಕನ್ಯಾ, ಶ್ರೇಷ್ಠ  ಸೇರಿ ಒಟ್ಟು ಎಂಟು ಮಂದಿ ಪ್ರಯಾಣಿಸುತ್ತಿದ್ದರು. ಇವರೆಲ್ಲಾ ಬೆಂಗಳೂರಿನ ರಾಜರಾಜೇಶ್ವರಿ ನಗರ ನಿವಾಸಿಗಳಾಗಿದ್ದು ಬಾಗಲಕೋಟೆ ಜಿಲ್ಲೆ ಬಾದಾಮಿ ಬನಶಂಕರಿ ದೇವಾಲಯಕ್ಕಾಗಿ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಗಾಯಾಳುಗಳಲ್ಲಿ ಇಬ್ಬರು ಮಕ್ಕಳೂ ಸೇರಿದ್ದು ಎಲ್ಲಾ ಗಾಯಾಳುಗಳನ್ನು ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಖಾರು ಸಂಪೂರ್ಣ ಜಖಂ ಆಗಿದೆ.ಸ್ಥಳಕ್ಕೆ ಚಿತ್ರದುರ್ಗ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp