ಅಕ್ಟೋಬರ್ 1 ರೊಳಗೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಶೌಚಾಲಯ ನಿರ್ಮಾಣ

: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯಡಿ, ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲೂ ಅಕ್ಟೋಬರ್‌ರೊಳಗೆ ಕಡ್ಡಾಯವಾಗಿ ...

Published: 17th July 2019 12:00 PM  |   Last Updated: 17th July 2019 01:59 AM   |  A+A-


Representational image

ಸಾಂದರ್ಭಿಕ ಚಿತ್ರ

Posted By : SD SD
Source : The New Indian Express
ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯಡಿ, ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲೂ ಅಕ್ಟೋಬರ್‌ರೊಳಗೆ ಕಡ್ಡಾಯವಾಗಿ ಶೌಚಾಲಯಗಳನ್ನು ಹೊಂದಲೇಬೇಕು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಎಲ್ಲ ಶಾಲೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲು ನರೇಗಾ ಯೋಜನೆಯಡಿಯಲ್ಲಿ ಅಭಿಯಾನ ಕೈಗೊಂಡು ಅ.1ಕ್ಕೆ ಎಲ್ಲ ಸರಕಾರಿ ಶಾಲೆಗಳಲ್ಲೂ ಕಡ್ಡಾಯವಾಗಿ ಶೌಚಾಲಯ ಹೊಂದಿರಬೇಕು ಎಂದು ನಿರ್ದೇಶನ ನೀಡಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

2018ರ ವಿಧಾನಸಭಾ ಚುನಾವಣೆ ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಸರಕಾರಿ (ಮತಗಟ್ಟೆಗಳೆಂದು ಗುರುತಿಸಿರುವ) ಶಾಲೆಗಳಲ್ಲಿ ಅಗತ್ಯ ಮೂಲ ಸೌಕರ್ಯಗಳಲ್ಲಿ ಒಂದಾದ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿತ್ತು. 

ಹಾಗೆಯೇ ಶೌಚಾಲಯ ಹಾಗೂ ಶುದ್ಧ ಕುಡಿಯುವ ನೀರಿಗಾಗಿ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಂಬಂಧಪಟ್ಟ ಶಾಲೆಗಳ ಮುಖ್ಯೋಪಾಧ್ಯಾಯರ ಖಾತೆಗೆ ಹಣ ಜಮಾ ಮಾಡುತ್ತಾರೆ. ಆದರೆ 4 ಸಾವಿರ ಶಾಲೆಗಳಲ್ಲಿ ಶೌಚಾಲಯ ಇಲ್ಲ ಎಂದಾದ ಮೇಲೆ ಬಳಕೆ ಆಗದೇ ಇರುವ ಅನುದಾನ ಸರಕಾರಕ್ಕೆ ವಾಪಸ್‌ ನೀಡಬೇಕಿತ್ತು. 

ಈ ಹಿನ್ನೆಲೆಯಲ್ಲಿ ಎಲ್ಲ ಉಪನಿರ್ದೇಶಕರು ಪ್ರತಿ ವಾರವೂ ಸಮೀಕ್ಷೆ ನಡೆಸಿ, ಪಟ್ಟಿ ಸಿದ್ಧಪಡಿಸಲು ಸೂಚಿಸಿದ್ದೇವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

ಕರ್ನಾಟಕದ 48.188 ಸರ್ಕಾರಿ ಶಾಲೆಗಳಿದ್ದು,  ಅದರಲ್ಲಿ 4,696 ಹೈಸ್ಕೂಲ್ ಗಳಿದ್ದು, ಒಂದರಲ್ಲೂ ಶೌಚಾಲಯ ಇಲ್ಲ, ಅದರಲ್ಲಿ 2, 847 ಬಾಲಕರು, ಹಾಗೂ 1,350 ಬಾಲಕಿಯರು ವ್ಯಾಸಂಗ ಮಾಡುತ್ತಿದ್ದಾರೆ., ಆದರೆ ಇವರಿಗೆ ಶೌಚಾಲಯವಿಲ್ಲ. 
Stay up to date on all the latest ರಾಜ್ಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp