ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಅಪಹರಣ ದೂರು: ಪೊಲೀಸರಿಂದ ಎಫ್ಐಆರ್ ದಾಖಲು

ಕಾಗವಾಡದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಅವರನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ...
ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್
ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್
ಬೆಂಗಳೂರು: ಕಾಗವಾಡದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಅವರನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸಮನ್ವಯ ಸಮಿತಿ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂಬಂಧ ವಿಧಾನಸಭಾಧ್ಯಕ್ಷ ಕೆ ಆರ್ ರಮೇಶ್ ಕುಮಾರ್ ಅವರಿಗೆ ದೂರು ಸಲ್ಲಿಸಿದ್ದು ನಿನ್ನೆ ಸದನದಲ್ಲಿ ವಿಶ್ವಾಸಮತ ವೇಳೆ ಮತ ಚಲಾಯಿಸದಂತೆ ತಡೆಯಲು ಬಿಜೆಪಿ ನಾಯಕರು ಪಾಟೀಲ್ ಅವರನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿದ್ದರು.
ಪಾಟೀಲ್ ಅವರನ್ನು ಬೆಂಗಳೂರಿನ ವಿಂಡ್ ಫ್ಲವರ್ ಪ್ರಕೃತಿ ರೆಸಾರ್ಟ್ ಅಂಡ್ ಸ್ಪಾದಿಂದ ಅಕ್ರಮವಾಗಿ ಬಿಜೆಪಿ ನಾಯಕರು ಕದ್ದೊಯ್ದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದರು.
ಶ್ರೀಮಂತ್ ಪಾಟೀಲ್ ನಿನ್ನೆ ಮುಂಬೈಯ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದರು.
ಸ್ಪೀಕರ್ ದೂರನ್ನು ಗೃಹ ಇಲಾಖೆಗೆ ವರ್ಗಾಯಿಸಿದ್ದು, ಗೃಹ ಇಲಾಖೆ ಪೊಲೀಸ್ ಮಹಾನಿರ್ದೇಶಕರಿಗೆ ಎಫ್ಐಆರ್ ದಾಖಲಿಸುವಂತೆ ಆದೇಶ ನೀಡಿದರು.
ಆದೇಶದ ಪ್ರಕಾರ ವಿಧಾನಸೌಧ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 365ರಡಿಯಲ್ಲಿ ಕೇಸು ದಾಖಲಿಸಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com