ಈ ವರ್ಷದ ಅಂತ್ಯದ ವೇಳೆಗೆ 16,838 ಪೊಲೀಸ್ ಹುದ್ದೆ ಭರ್ತಿ ಮಾಡಿ: ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಈ ವರ್ಷದ ಅಂತ್ಯದ ವೇಳೆಗೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ...
ಹೈಕೋರ್ಟ್
ಹೈಕೋರ್ಟ್
ಬೆಂಗಳೂರು: ಈ ವರ್ಷದ ಅಂತ್ಯದ ವೇಳೆಗೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. 
ಪೊಲೀಸ್ ಇಲಾಖೆಯಲ್ಲಿ 16 ಸಾವಿರದ 838 ಹುದ್ದೆಗಳು ಖಾಲಿಯಿದ್ದು, ಇಷ್ಟೊಂದು ಹುದ್ದೆಗಳನ್ನು ಖಾಲಿಯಿರಿಸಿರುವುದು ಆಘಾತಕಾರಿ ವಿಷಯವಲ್ಲದೆ ರಾಜ್ಯ ಸರ್ಕಾರದ ಕಾರ್ಯವೈಖರಿಯ ದುಸ್ಥಿತಿಯನ್ನು ತೋರಿಸುತ್ತದೆ ಎಂದು ಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಖಾಲಿ ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆ ಅಡ್ಡಿಯನ್ನುಂಟುಮಾಡುವಂತಿಲ್ಲ ಎಂದು ಕೋರ್ಟ್ ಸೂಚಿಸಿದೆ.
ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸ್ ವ್ಯವಸ್ಥೆಯ ಅಗತ್ಯವಿದೆ ಎಂದು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಹೆಟ್ ಟಿ ನರೇಂದ್ರ ಪ್ರಸಾದ್ ಅವರನ್ನೊಳಗೊಂಡ ವಿಭಾಗೀಯ ಪೀಠ ಹೇಳಿದೆ. 
ಈ ಬಗ್ಗೆ ಸ್ವಯಂಪ್ರೇರಿತ ಅರ್ಜಿ ಸಲ್ಲಿಸಬಹುದು ಎಂಬ ಸುಪ್ರೀಂ ಕೋರ್ಟ್ ಆದೇಶದಂತೆ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಗಳ ಅಗತ್ಯದ ಕುರಿತು ಮೌಲ್ಯಮಾಪನ ಮಾಡಲಾಗಿದೆಯೇ ಎಂದು ಒಂದು ತಿಂಗಳಲ್ಲಿ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಇದೇ ಸಂದರ್ಭದಲ್ಲಿ ಸೂಚಿಸಿ ಮುಂದಿನ ವಿಚಾರಣೆಯನ್ನು ಆಗಸ್ಟ್ 27ಕ್ಕೆ ಮುಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com