ಐಎಂಎ ವಂಚನೆ ಪ್ರಕರಣದ ಕಿಂಗ್ ಪಿನ್ ಮನ್ಸೂರ್ ಖಾನ್ ಬೆಂಗಳೂರಿಗೆ ಕರೆತಂದ ಅಧಿಕಾರಿಗಳು

ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಮಾಡಿದ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಐಎಂಎ ಜ್ಯುವೆಲ್ಸ್ ಮಾಲೀಕ ಮನ್ಸೂರ್ ಖಾನ್‍ ನನ್ನು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಎಸ್ ಐಟಿ ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ.

Published: 20th July 2019 12:00 PM  |   Last Updated: 20th July 2019 08:44 AM   |  A+A-


IMA scam accused Mohammed Mansoor Khan brought to Bengaluru By SIT Officials

ಐಎಂಎ ವಂಚನೆ ಪ್ರಕರಣದ ಕಿಂಗ್ ಪಿನ್ ಮನ್ಸೂರ್ ಖಾನ್ (ಸಂಗ್ರಹ ಚಿತ್ರ)

Posted By : SVN SVN
Source : Online Desk
ಬೆಂಗಳೂರು: ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಮಾಡಿದ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಐಎಂಎ ಜ್ಯುವೆಲ್ಸ್ ಮಾಲೀಕ ಮನ್ಸೂರ್ ಖಾನ್‍ ನನ್ನು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಎಸ್ ಐಟಿ ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ.

ಮನ್ಸೂರ್ ಖಾನ್‍ ನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ರಾತ್ರಿ ದೆಹಲಿ ಕೋರ್ಟ್ ಎದುರು ಹಾಜರು ಪಡಿಸಿದ್ದರು. ಇಂದು ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಕರೆದುಬಂದಿದ್ದಾರೆ. ಈ ವೇಳೆ ಐಎಂಎ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಕರ್ನಾಟಕದ ಎಸ್ ಐಟಿ ಅಧಿಕಾರಿಗಳು ಕೂಡ ಇಡಿ ಅಧಿಕಾರಿಗಳ ಜೊತೆ ಇದ್ದರು ಎನ್ನಲಾಗಿದೆ.

ಇಂದು ಬೆಳಗ್ಗೆ 11 ಗಂಟೆಗೆ ಶಾಂತಿನಗರದ ಜಾರಿ ನಿರ್ದೇಶನಾಲಯದ ವಿಶೇಷ ಕೋರ್ಟ್ ಎದುರು ಅಧಿಕಾರಿಗಳು ಮನ್ಸೂರ್ ಖಾನ್‍ನನ್ನು ಹಾಜರು ಪಡಿಸಲಿದ್ದಾರೆ. ಈ ವೇಳೆ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಸಲ್ಲಿಸುವ ಸಾಧ್ಯತೆ ಇದೆ. ಪೊಲೀಸರ ಜೊತೆಗೆ ಎಸ್‍ಐಟಿ ಇಲಾಖೆಯವರು ಕೂಡ ತಮ್ಮ ವಶಕ್ಕೆ ನೀಡುವಂತೆ ಕೇಳುವ ಸಾಧ್ಯತೆ ಇದೆ ಎನ್ನಲಾಗಿದೆ. 

ನಿನ್ನೆ  ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮನ್ಸೂರ್ ಖಾನ್ ನನ್ನು ಬಂಧಿಸಿದ್ದರು. ಬಳಿಕ ಆತನನ್ನು ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿ ಇರುವ ದೆಹಲಿಯ ಎಂಟಿಎನ್ಎಲ್ ಕಟ್ಟಡಕ್ಕೆ ಕರೆದೊಯ್ಯಲಾಗಿದ್ದು, ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಲಾಗಿತ್ತು. 

ಈ ಹಿಂದೆ ದುಬೈಗೆ ಪರಾರಿಯಾಗಿದ್ದ ಮನ್ಸೂರ್ ಖಾನ್, ತನಗೆ ಜೀವ ಬೆದರಿಕೆ ಇದೆ. ಪೊಲೀಸರು ಮತ್ತು ತನಿಖಾಧಿಕಾರಿಗಳು ತನಗೆ ಮತ್ತು ತನ್ನ ಕುಟುಂಬಕ್ಕೆ ಭದ್ರತೆ ನೀಡಿದರೆ ತಾನು ಶರಣಾಗಲು ಸಿದ್ಧ ಎಂದು ಹೇಳಿದ್ದ. ಅದರಂತೆ ಇಂದು ಆತ ದೆಹಲಿಗೆ ಆಗಮಿಸಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿಯೇ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದರು.

ಮನ್ಸೂರ್ ಖಾನ್ ತನ್ನ ಸಂಸ್ಥೆಯಲ್ಲಿ ಜನ ಸಾಮಾನ್ಯರು ಹೂಡಿಕೆ ಮಾಡಿದ್ದ ಸಾವಿರಾರು ರೂಪಾಯಿ ಹಣವನ್ನು ತೆಗೆದುಕೊಂಡು ಸುಮಾರು ಒಂದು ತಿಂಗಳ ಹಿಂದೆ ಪರಾರಿಯಾಗಿದ್ದನು. ಈಗಾಗಲೇ ಮನ್ಸೂರ್ ಖಾನ್‍ನ ಸುಮಾರು 200 ಕೋಟಿ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ. ಈತ ಬರುವ ಸುದ್ದಿ ಕೇಳಿ ಇಡಿ ಕೋರ್ಟ್ ಬಳಿ ಸಾವಿರಾರು ಜನರು ಬರುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಡಿ ಕೋರ್ಟ್ ಬಳಿ ಪೊಲೀಸರನ್ನು ನಿಯೋಜಿಸಲಾಗುತ್ತಿದೆ.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp