ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಮಳೆಯ ಚಿತ್ರ
ಮಳೆಯ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಧಾರಾಕಾರ ಮಳೆಯಿಂದಾಗಿ ಮಂಗಳೂರು ನಗರ, ಪುತ್ತೂರು ಮತ್ತಿತರ ಕಡೆಗಳಲ್ಲಿ ಜನರು ತೀವ್ರ ರೀತಿಯ ತೊಂದರೆ ಎದುರಿಸುವಂತಾಗಿದೆ. 
ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾಡಳಿತ ಇಂದು ಕೂಡಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 
ಮುಂದಿನ ಮೂರು ದಿನ 200 ಮಿಲಿ ಮೀಟರ್ ಗೂ ಹೆಚ್ಚು ಮಳೆ ಸುರಿಯಲಿದೆ ಎಂಬ ವರದಿ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com