ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಹಿನ್ನಡೆ: ರೆಡ್ಡಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ!

ಅಕ್ರಮ ಗಣಿಗಾರಿಕೆಯ ಕೇಸೊಂದಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಕೋರಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ...
ಜನಾರ್ದನ ರೆಡ್ಡಿ
ಜನಾರ್ದನ ರೆಡ್ಡಿ
ಬೆಂಗಳೂರು: ಅಕ್ರಮ ಗಣಿಗಾರಿಕೆಯ ಕೇಸೊಂದಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಕೋರಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಹಿನ್ನಡೆಯಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಲಯವು ಗಾಲಿ ಜನಾರ್ದನ ರೆಡ್ಡಿ ಹಾಗೂ ಇನ್ನಿತರ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ. ಇಂಡಿಯನ್ ಮೈನಿಂಗ್ ಕಂಪನಿಯ ಹೆಸರಿನಲ್ಲಿ ನಡೆಸಿದ ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಅರ್ಜಿ ಸಲ್ಲಿಸಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಗಳನ್ನು ತೆಗೆದು ಹಾಕುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಮೇಲ್ನೋಟಕ್ಕೆ ಆರೋಪಿಗಳು ಸಂಚು, ಅಕ್ರಮ ವ್ಯವಹಾರದಲ್ಲಿ ತೊಡಗಿರುವುದು ಕಂಡು ಬಂದಿದ್ದು, ಈ ಬಗ್ಗೆ ವಿಚಾರಣೆ ಅಗತ್ಯವಿದೆ ಎಂದು ನ್ಯಾಯಾಧೀಶ ರಾಮಚಂದ್ರ ಉದ್ದರ್ ತಿಳಿಸಿದ್ದಾರೆ.
ಎಂ ನಾಸಿಕ್ ಸಾಬ್ ಎಂಬುವವರಿಗೆ ಸೇರಿದ್ದ ಇಂಡಿಯನ್ ಮೈನಿಂಗ್ ಕಂಪನಿ ಹೆಸರಿನಲ್ಲಿ ಅಕ್ರಮವಾಗಿ ಕಬ್ಬಿಣ ಅದಿರನ್ನು ಸಾಗಾಟ ಹಾಗೂ ಮಾರಾಟ ಮಾಡಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ ಭಾರಿ ನಷ್ಟವಾಗಿದೆ ಎಂದು 2015ರಲ್ಲಿ ಲೋಕಯುಕ್ತ ಠಾಣೆಯಲ್ಲಿ ಗಾಲಿ ಜನಾರ್ದನ ರೆಡ್ಡಿ ಹಾಗೂ ಇತರರ ವಿರುದ್ಧ ದೂರು ದಾಖಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com