ಶಿವಮೊಗ್ಗ: ತುಂಗೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರುಪಾಲು

ತುಂಗಾ ನದಿಯಲ್ಲಿ ಈಜಲು ಹೋದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬಾ ತಾಲೂಕಿನ ಜೋಳದ ಗದ್ದೆ ಗ್ರಾಮದಲ್ಲಿ ನಡೆದಿದೆ.

Published: 21st July 2019 12:00 PM  |   Last Updated: 21st July 2019 07:20 AM   |  A+A-


ಶಿವಮೊಗ್ಗ: ತುಂಗೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರುಪಾಲು

Posted By : RHN RHN
Source : UNI
ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬಾ ತಾಲೂಕಿನ ಜೋಳದ ಗದ್ದೆ ಗ್ರಾಮದಲ್ಲಿ ನಡೆದಿದೆ.

ಪೊಲೀಸರು ಮೃತರನ್ನು ಪ್ರದೀಪ್ (17), ಕಾರ್ತಿಕ್ (18) ಹಾಗೂ ಸುರೇಶ್ (16) ಎಂದು ಗುರುತಿಸಿದ್ದಾರೆ. ಭಾನುವಾರ ಈ ಬಾಲಕರು ನದಿಯಲ್ಲಿ ಈಜಲು ಹೋದಾಗ ಸುಳಿಯಲ್ಲಿ ಸಿಲುಕಿ ನಿಯಂತ್ರಣ ಕಳೆದುಕೊಂಡು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಅಗ್ನಿ ಶಾಮಕ ದಳದ ಸಿಬ್ಬಂದಿ, ಪೊಲೀಸರು ಹಾಗೂ ಮುಳುಗು ತಜ್ಞರು ಎರಡು ಮೃತದೇಹಗಳನ್ನು ಪತ್ತೆ ಹಚ್ಚಿದ್ದು, ಮೂರನೇ ಬಾಲಕನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. 

ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp