ಐಎಂಎ ಹಗರಣ: ಎದೆನೋವು ಎಂದ ಮನ್ಸೂರ್ ಖಾನ್ ಗೆ ಜಯದೇವ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ

ಬಹು ಕೋಟಿ ಐಎಂಎ ಹಗರಣದ ಮುಖ ಆರೋಪಿ ಮನ್ಸೂರ್ ಖಾನ್ ನನ್ನು ಜುಲೈ 21 ರಂದು ಎದೆ ನೋವು ಮತ್ತುಹೃದಯಬಡಿತದ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಲಾಗಿದೆ
ಮನ್ಸೂರ್ ಖಾನ್
ಮನ್ಸೂರ್ ಖಾನ್
ಬೆಂಗಳೂರು: ಬಹು ಕೋಟಿ ಐಎಂಎ ಹಗರಣದ ಮುಖ ಆರೋಪಿ ಮನ್ಸೂರ್ ಖಾನ್ ನನ್ನು ಜುಲೈ 21 ರಂದು ಎದೆ ನೋವು ಮತ್ತುಹೃದಯಬಡಿತದ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಲಾಗಿದೆ.
ಮನ್ಸೂರ್ ಕಾನ್ ನನ್ನು ಜಯದೇವ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯೋವಾಸ್ಕುಲರ್ ಸೈನ್ಸಸ್ ಗೆ ಕರೆದೊಯ್ಯಲಾಯಿತು. ಸಂಸ್ಥೆಯ ನಿರ್ದೇಶಕ ಸಿ ಎನ್ ಮಂಜುನಾಥ್ ಅವರ ಪ್ರಕಾರ, ಆತಂಕ ಮತ್ತು ಒತ್ತಡವು ಅವರ ಆರೋಗ್ಯದ ಏರುಪೇರಿಗೆ ಕಾರಣವಾಗಿದೆ.
ಜುಲೈ 20 ರಂದು ವಿಶೇಷ ಅಕ್ರಮ ಹಣ ವರ್ಗಾವಣೆ ನಿಷೇಧ ಕಾಯ್ದೆ  (ಪಿಎಂಎಲ್‌ಎ) ಅಡಿಯಲ್ಲಿ ಖಾನ್ ನನ್ನು ಜಾರಿ ನಿರ್ದೇಶನಾಲಯ (ಇಡಿ) ಮೂರು ದಿನಗಳ ಕಾಲ ವಶಕ್ಕೆ ಪಡೆದಿತ್ತು. 
ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾಗ ಎದೆ ನೋವು ಉಂಟಾಗುತ್ತಿದೆ ಎಂದು ಮನ್ಸೂರ್ ಹೇಳಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಆತನನ್ನು ಜಯದೇವ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಿದ್ದಾರೆ.
ಇಸಿಜಿ ಸೇರಿದಂತೆ ಹಲವು ತಪಾಸಣೆ ನಡೆಸಲಾಗಿದೆ. ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಐ ಮಾನಿಟರಿ ಅಡ್ವೈಸರಿ (ಐಎಂಎ) ಮಾಲೀಕ ಹಾಗೂ  ಸಂಸ್ಥಾಪಕ, ಮನ್ಸೂರ್ ಖಾನ್ ಸಾವಿರಾರು ಕೋಟಿ ರು. ವಂಚಿಸಿದ್ದ ಪ್ರಕರಣದಲ್ಲಿ ಖಾನ್ ವಿರುದ್ಧ ಹಲವಾರು ದೂರುಗಳು ದಾಖಲಾದ ನಂತರ ಕಳೆದ ತಿಂಗಳು ಭಾರತದಿಂದ ಪರಾರಿಯಾಗಿದ್ದನು. ಅದಾಗಿ ಇತ್ತೀಚೆಗೆ ಭಾರತಕ್ಕೆ ಹಿಂತಿರುಗಿದ್ದ ಖಾನ್ ಅನ್ನು ಇಡಿ ಅಧಿಕಾರಿಗಳು ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com