ಬೆಂಗಳೂರು: ತಡರಾತ್ರಿಯಲ್ಲಿ ಪೋಲೀಸ್ ಕಾರ್ಯಾಚರಣೆ, ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧನ

ಕೊಲೆ ಹಾಗೂ ಕೊಲೆಯತ್ನದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸಲು ಮುಂದಾದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಒಬ್ಬನ ಕಾಲಿಗೆ....
ತಡರಾತ್ರಿಯಲ್ಲಿ ಪೋಲೀಸ್ ಕಾರ್ಯಾಚರಣೆ, ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧನ
ತಡರಾತ್ರಿಯಲ್ಲಿ ಪೋಲೀಸ್ ಕಾರ್ಯಾಚರಣೆ, ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧನ
ಬೆಂಗಳೂರು: ಕೊಲೆ ಹಾಗೂ ಕೊಲೆಯತ್ನದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸಲು ಮುಂದಾದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಒಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಗರದ ಕಾಟನ್ ಪೇಟೆಯಲ್ಲಿ ರವಿವಾರ ತಡರಾತ್ರಿ ನಡೆದಿದೆ.
ರೌಡಿಶೀಟರ್ ಅನಿಲ್ (32) ಮೇಲೆ ಗುಂಡು ಹಾರಿಸಲಾಗಿದೆ. ಈತ ಕೊಲೆ, ಕೊಲೆಯತ್ನ ಸೇರಿ ಎಂಟಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.
ಚಾಮರಾಜಪೇಟೆ ಠಾಣೆಯ ಇನ್ಸ್‌ಪೆಕ್ಟರ್ ಕುಮಾರಸ್ವಾಮಿ, ಭಾನುವಾರ ರಾತ್ರಿ 12.55ಕ್ಕೆಕಾಟನ್ ಪೇಟೆಯ ವೆಟರ್ನರಿ ಹಾಸ್ಪಿಟಲ್ ಹಿಂಭಾಗದಲ್ಲಿ ರೌಡಿಶೀಟರ್ ಮೇಲೆ ಫೈರಿಂಗ್ ಮಾಡಿದ್ದಾರೆ.
ಕೊಲೆ ಆರೋಪವಿದ್ದ ಅನಿಲ್ ತಲೆತಪ್ಪಿಸಿಕೊಂಡಿದ್ದ. ಖಚಿತ ಮಾಹಿತಿಯ ಆಧಾರದಲ್ಲಿ ಆರೋಪಿಯ ಬಂಧನಕ್ಕೆ ತೆರಳಿದ್ದ ಪೋಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಅನಿಲ್ ಮೇಲೆ ಆತ್ಮರಕ್ಷಣೆಗಾಗಿ ಫೈರಿಂಗ್ ಮಾಡಲಾಗಿದೆ.
ಇದೇ ವೇಳೆ ಪೋಲೀಸ್ ಪೇದೆ ಚಂದ್ರಶೇಖರ ಪಾಟೀಲ್ ಎಂಬುವವರ ಎಡ ಭುಜಕ್ಕೆ ಅನಿಲ್ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಗಾಯಾಳು ಪೇದೆ ಹಾಗೂ ಆರೋಪಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು  ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com