ಬೆಂಗಳೂರಿನಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿ: ಅಲೋಕ್ ಕುಮಾರ್

ಪ್ರಸಕ್ತ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬೆಂಗಳೂರು ನಗರದಲ್ಲಿ ಎರಡು ದಿನ ನಿಷೇಧಾಜ್ಞೆ...

Published: 23rd July 2019 12:00 PM  |   Last Updated: 23rd July 2019 06:10 AM   |  A+A-


Prohibitory orders across Bengaluru for two days after Congress, BJP supporters clash

ಅಲೋಕ್ ಕುಮಾರ್

Posted By : LSB LSB
Source : UNI
ಬೆಂಗಳೂರ: ಪ್ರಸಕ್ತ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬೆಂಗಳೂರು ನಗರದಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳ ಕಾಲ ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡುತ್ತಿದ್ದು, 5 ಜನಕ್ಕಿಂತ ಜಾಸ್ತಿ ಜನ ಒಂದು ಕಡೆ ಸೇರುವಂತಿಲ್ಲ, ಪ್ರತಿಭಟನೆ ಮಾಡುವಂತಿಲ್ಲ ಎಂದರು.

ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ, ಇಂದು ಮತ್ತು ಬುಧವಾರ ನಗರ ಪೊಲೀಸ್ ವ್ಯಾಪ್ತಿಯಲ್ಲಿ ಬಾರ್, ವೈನ್ ಸ್ಟೋರ್ ಪಬ್ ಗಳನ್ನು ಬಂದ್ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಎರಡು ದಿನ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ 144 ಜಾರಿಮಾಡಿದ್ದೇವೆ. ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp