ಮನ್ಸೂರ್ ಖಾನ್ ಇ.ಡಿ. ಕಸ್ಟಡಿ ಅವಧಿ ಮತ್ತೆ ಮೂರು ದಿನ ವಿಸ್ತರಣೆ

ಹೂಡಿಕೆದಾರರಿಗೆ ಬಹುಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಂಎ ವಂಚನೆ ಪ್ರಕರಣದ ಕಿಂಗ್ ಪಿನ್ ಮನ್ಸೂರ್ ಖಾನ್ ನನ್ನು ಕೋರ್ಟ್ ಮತ್ತೆ ಮೂರು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಹೂಡಿಕೆದಾರರಿಗೆ ಬಹುಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಂಎ ವಂಚನೆ ಪ್ರಕರಣದ ಕಿಂಗ್ ಪಿನ್ ಮನ್ಸೂರ್ ಖಾನ್ ನನ್ನು ಕೋರ್ಟ್ ಮತ್ತೆ ಮೂರು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ.
ಐಎಂಎ (ಐ ಮಾನಿಟರಿ ಅಡ್ವೈಸರಿ) ಸಮೂಹ ಕಂಪನಿ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮೊಹಮದ್ ಮನ್ಸೂರ್ ಖಾನ್ ಅವರನ್ನು ಇದೇ 26ರವರೆಗೆ ಜಾರಿ ನಿರ್ದೇಶನಾಲಯದ(ಇ.ಡಿ) ತನಿಖಾಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದೆ. ಈಗಾಗಲೇ ಮೂರು ದಿನಗಳಿಂದ ಇ.ಡಿ ಕಸ್ಟಡಿಯಲ್ಲಿದ್ದ ಮನ್ಸೂರ್ ಖಾನ್ ಅವರನ್ನು ಇ.ಡಿ ಅಧಿಕಾರಿಗಳು ಮಂಗಳವಾರ ಮಧ್ಯಾಹ್ನ ನಗರದ ಸೆಷನ್ಸ್ ಕೋರ್ಟ್ ಪ್ರಧಾನ ನ್ಯಾಯಾಧೀಶ ಶಿವಶಂಕರ ಬಿ.ಅಮರಣ್ಣವರ ಮುಂದೆ ಹಾಜರುಪಡಿಸಿದರು.
ಇ.ಡಿ ಪರ ವಕೀಲರು, ಆರೋಪಿಯ ಅನಾರೋಗ್ಯ ಕಾರಣದಿಂದ ಸಮಗ್ರ ತನಿಖೆ ಕೈಗೊಳ್ಳಲು ಸಾಧ್ಯವಾಗಿಲ್ಲ. ಆದ್ದರಿಂದ ಈ ತಿಂಗಳ 30ರವರೆಗೆ ಕಸ್ಟಡಿ ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಿದರು.
ಗಣ್ಯರ ಹೆಸರು ಹೇಳಿದ ಕಿಂಗ್ ಪಿನ್
ಇನ್ನು ಪ್ರಸ್ತುತ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಶದಲ್ಲಿರುವ ಮನ್ಸೂರ್ ಖಾನ್, ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧ ಇರುವ ಕೆಲ ರಾಜಕಾರಣಗಳು ಮತ್ತು ಕೆಲ ಸ್ಥಳೀಯ ಮುಸ್ಲಿಂ ಉದ್ಯಮಿಗಳು ಮತ್ತು ಮುಸ್ಲಿಂ ಧಾರ್ಮಿಕ ಮುಖಂಡರ ಹೆಸರು ಹೇಳಿದ್ದಾನೆ ಎಂದು ಹೇಳಲಾಗಿದೆ.  ಆತ ನೀಡಿರುವ ಮಾಹಿತಿ ಮೇರೆಗೆ ಅಧಿಕಾರಿಗಳು ತನಿಖೆ ನಡೆಸಲು ಮುಂದಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com