ಲೋಕಾಯುಕ್ತರ ನೇಮಕಕ್ಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್

ಕಳೆದೊಂದು ವರ್ಷದಿಂದ ಖಾಲಿ ಇರುವ ಲೋಕಾಯುಕ್ತ ಹುದ್ದೆಯ ಭರ್ತಿ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.
ಕರ್ನಾಟಕ ಲೋಕಾಯುಕ್ತ
ಕರ್ನಾಟಕ ಲೋಕಾಯುಕ್ತ
ಬೆಂಗಳೂರು: ಕಳೆದೊಂದು ವರ್ಷದಿಂದ ಖಾಲಿ ಇರುವ ಲೋಕಾಯುಕ್ತ ಹುದ್ದೆಯ ಭರ್ತಿ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.

ವಕೀಲ ಉಮಾಪತಿ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಲೋಕಾಯುಕ್ತ ನ್ಯಾಯಮೂರ್ತಿಗಳ ಹುದ್ದೆ 2018 ಮಾರ್ಚ್ 1ರಿಂದ ತೆರವಾಗಿದೆ. ಅದನ್ನು ಭರ್ತಿ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಪದೇ ಪದೆ ಮನವಿ ಸಲ್ಲಿಸಿದರೂ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ರಾಜ್ಯದ ಭ್ರಷ್ಟಾಚಾರ ಪ್ರಕರಣಗಳು ಹಾಗೂ ಸಾರ್ವಜನಿಕರ ದೂರು ದುಮ್ಮಾನಗಳನ್ನು ಕೇಳುವವರಿಲ್ಲದಂತಾಗಿದೆ. ಲೋಕಾಯುಕ್ತ ಕಾಯ್ದೆಯ ಅನುಸಾರ, ಸಾಂವಿಧಾನಿಕ ಹುದ್ದೆಯನ್ನು ಒಂದು ವರ್ಷಕ್ಕಿಂತ ಹೆಚ್ಚು ಅವಧಿಗೆ ಖಾಲಿ ಇಡುವಂತಿಲ್ಲ. ಆದ್ದರಿಂದ ಹುದ್ದೆಯ ಶೀಘ್ರ ಭರ್ತಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com