ಬೆಂಗಳೂರು: ಟೈರ್ ಸ್ಫೋಟಗೊಂಡು ಕೆರೆಗೆ ಬಿದ್ದ ಕಾರು, ಓರ್ವ ಮಹಿಳೆ ಸಾವು

ಕಾರಿನ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿ ಕೆರೆಗೆ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಗುರುವಾರ ನಡೆದಿದೆ...

Published: 25th July 2019 12:00 PM  |   Last Updated: 25th July 2019 07:31 AM   |  A+A-


Woman killed in tyre burst accident in Bengaluru

ಸಾಂದರ್ಭಿಕ ಚಿತ್ರ

Posted By : LSB LSB
Source : UNI
ಬೆಂಗಳೂರು: ಕಾರಿನ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿ ಕೆರೆಗೆ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ  ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಗುರುವಾರ ನಡೆದಿದೆ.  

35 ವರ್ಷದ ಮಮತಾ ಮೃತ ಮಹಿಳೆ. ಪತಿ ಆನಂದ್ ಜೊತೆಗೆ ಹುಲಿಮಂಗಲದಿಂದ ಜಿಗಣಿ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದಾಗ, ಮುಂಭಾಗದ ಚಕ್ರದ ಟೈರ್ ಸ್ಫೋಟಗೊಂಡು, ಕಾರು ಮೂರು ಪಲ್ಟಿಯಾಗಿ ಕೆರೆಗೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ. ಪತಿ ಆನಂದ್ ಪ್ರಾಣಾಪಾಯದಿಂದ ಪಾರಾಗಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. 

ಘಟನೆಗೆ ಸಂಬಂಧಿಸಿದಂತೆ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Stay up to date on all the latest ರಾಜ್ಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp