ಕೆಎಂಎಫ್ ಫೈಟ್ : ಕಾಂಗ್ರೆಸ್ಸಿನ ನಾಲ್ವರು ನಿರ್ದೇಶಕರನ್ನು ಹೈಜಾಕ್ ಮಾಡಿದ ರೇವಣ್ಣ

ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಬೀಳುತ್ತಿದ್ದಂತೆ ಕೆಎಂಎಫ್ ಅಧ್ಯಕ್ಷ ಗಾದಿಗಾಗಿ ಮಾಜಿ ಸಚಿವ ಎಚ್ ಡಿ ರೇವಣ್ಣ ರೆಸಾರ್ಟ್ ರಾಜಕೀಯ ಆರಂಭಿಸಿದ್ದಾರೆ. ಕಾಂಗ್ರೆಸ್ಸಿನ ನಾಲ್ವರು ನಿರ್ದೇಶಕರನ್ನು ಹೈಜಾಕ್ ಮಾಡಿ ಹೈದ್ರಾಬಾದಿಗೆ ಕರೆದೊಯ್ದಿದ್ದಾರೆ
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಬೀಳುತ್ತಿದ್ದಂತೆ ಕೆಎಂಎಫ್ ಅಧ್ಯಕ್ಷ ಗಾದಿಗಾಗಿ ಮಾಜಿ ಸಚಿವ ಎಚ್ ಡಿ ರೇವಣ್ಣ ರೆಸಾರ್ಟ್ ರಾಜಕೀಯ ಆರಂಭಿಸಿದ್ದಾರೆ. ಕಾಂಗ್ರೆಸ್ಸಿನ ನಾಲ್ವರು ನಿರ್ದೇಶಕರನ್ನು ಹೈಜಾಕ್ ಮಾಡಿ ಹೈದ್ರಾಬಾದಿಗೆ ಕರೆದೊಯ್ದಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಕೆಎಂಎಫ್ ಅಧ್ಯಕ್ಷ ಹುದ್ದೆಗೇರಲು  ರೇವಣ್ಣ ನಾಲ್ವರು ಕಾಂಗ್ರೆಸ್ ನಿರ್ದೇಶಕರನ್ನು ಹೈಜಾಕ್ ಮಾಡಿ ಹೈದ್ರಾಬಾದಿನ ಬಂಜಾರ ಹಿಲ್ಸ್ ರೆಸಾರ್ಟ್ ನಲ್ಲಿ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ. 
ಉಡುಪಿ ಹಾಲು ಒಕ್ಕೂಟದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಧಾರವಾಡ ಹಾಲು ಒಕ್ಕೂಟದ ಹಿರೇಗೌಡ, ಶಿವಮೊಗ್ಗ ಹಾಲು ಒಕ್ಕೂಟದ ವೀರಭದ್ರಬಾಬು ಹಾಗೂ ವಿಜಯಪುರ ಹಾಲು ಒಕ್ಕೂಟದ ಶ್ರೀಶೈಲ ಅವರನ್ನು ಹೈಜಾಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಕೆಎಂಎಫ್ ನಲ್ಲಿ 12 ನಿರ್ದೇಶಕರಿದ್ದು, ಕಾಂಗ್ರೆಸ್ ಪಕ್ಷದ 9, ಜೆಡಿಎಸ್ ನ ಮೂವರು ನಿರ್ದೇಶಕರಿದ್ದಾರೆ.  ಈ ಹಿಂದೆ ನಡೆದ ಮಾತುಕತೆ ಪ್ರಕಾರ ಕಾಂಗ್ರೆಸ್ ಪಕ್ಷದ ಭೀಮಾನಾಯಕ್ ಅವರಿಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ನಿರ್ಧರಿಸಲಾಗಿತ್ತು.
 ಆದರೆ, ಬದಲಾದ ರಾಜಕೀಯದಲ್ಲಿ  ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಎಚ್ ಡಿ ರೇವಣ್ಣ, ಹಿರಿಯ ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಮಾತನ್ನು ಧಿಕ್ಕರಿಸಿ  ಆ ಪಕ್ಷದ ನಾಲ್ವರು ನಿರ್ದೇಶಕರನ್ನು ಹೈಜಾಕ್ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com