ಬಿಎಸ್ ವೈ ವಿಶ್ವಾಸಮತ: ಜು. 29, 30ರಂದು ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ನಂತರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ ಬಿಎಸ್...
ಅಲೋಕ್ ಕುಮಾರ್
ಅಲೋಕ್ ಕುಮಾರ್
ಬೆಂಗಳೂರ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ನಂತರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 29 ಮತ್ತು 30ರಂದು ವಿಧಾನಸೌಧ ಸುತ್ತಮುತ್ತ ಎರಡು ಕಿ.ಮೀ. ವ್ಯಾಪ್ತಿಯಲ್ಲಿ   ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮಂಗಳವಾರ ಮಧ್ಯಾಹ್ನ 12 ಗಂಟೆವರೆಗೂ ನಿಷೇಧಾಜ್ಞೆ ಮುಂದುವರಿಯಲಿದೆ. ಸೆಕ್ಷನ್ 144 ಅಡಿಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿಷೇಧಾಜ್ಞೆ ಜಾರಿಗೊಳಿಸುತ್ತಿರುವುದಾಗಿ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು ತಿಳಿಸಿದ್ದಾರೆ.
ಕಳೆದ ಮಂಗಳವಾರ ಎಚ್ ಡಿ ಕುಮಾರಸ್ವಾಮಿ ಅವರ ವಿಶ್ವಾಸಮತಯಾಚನೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬೆಂಗಳೂರು ನಗರದಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದೀಗ ಮತ್ತೆ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com