ಮಂಡ್ಯ: ಕೆಎಸ್‌ಆರ್‌ಟಿಸಿಗೆ ಕಾರು ಡಿಕ್ಕಿ, ಭೀಕರ ಅಪಘಾತದಲ್ಲಿ 2 ಮಕ್ಕಳು ಸೇರಿ 3 ದಾರುಣ ಸಾವು!

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಮೂವರು ದಾರುಣ ಸಾವನ್ನಪ್ಪಿರುವ ಘಟನೆ ಗೆಜ್ಜಲಗೆರೆ ಬಳಿ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಮೂವರು ದಾರುಣ ಸಾವನ್ನಪ್ಪಿರುವ ಘಟನೆ ಗೆಜ್ಜಲಗೆರೆ ಬಳಿ ಸಂಭವಿಸಿದೆ.
ಮದ್ದೂರಿನ ಗೆಜ್ಜಲಗೆರೆ ಸಮೀಪದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಸ್ವಿಫ್ಟ್ ಕಾರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು. ಕಾರಿನಲ್ಲಿ ನಾಲ್ವರ ಪೈಕಿ ಮೂವರು ಸಾವನ್ನಪ್ಪಿದ್ದು ಇನ್ನೊಬ್ಬರಿಗೆ ಗಂಭೀರ ಗಾಯವಾಗಿದೆ.
ರಸ್ತೆ ಮಕ್ಕ ಅಪಘಾತವಾಗಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟರ ಗುರುತು ಪತ್ತೆಯಾಗಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com