ಮೀನುಗಾರರ ಸಾಲ ಮನ್ನಾ ಮಾಡಿದ ರಾಜ್ಯ ಸರ್ಕಾರ

ವಾಣಿಜ್ಯ ಹಾಗೂ ಪ್ರಾದೇಶಿಕ ಬ್ಯಾಂಕುಗಳಿಂದ ಮೀನುಗಾರರು ಪಡೆದಿರುವ ಸಾಲವನ್ನು ಸೋಮವಾರ ನಡೆದ ನೂತನ ಸಚಿವ ಸಂಪುಟ ಸಭೆಯಲ್ಲಿ ಮನ್ನಾ ಮಾಡಲಾಗಿದೆ ಎಂದು ಮೀನುಗಾರಿಕೆ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ವಾಣಿಜ್ಯ ಹಾಗೂ ಪ್ರಾದೇಶಿಕ ಬ್ಯಾಂಕುಗಳಿಂದ ಮೀನುಗಾರರು ಪಡೆದಿರುವ ಸಾಲವನ್ನು ಸೋಮವಾರ ನಡೆದ ನೂತನ ಸಚಿವ ಸಂಪುಟ ಸಭೆಯಲ್ಲಿ ಮನ್ನಾ ಮಾಡಲಾಗಿದೆ ಎಂದು ಮೀನುಗಾರಿಕೆ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2017-18 ಮತ್ತು 2018-19 ನೇ ಸಾಲಿನಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಒಟ್ಟು 23 ಸಾವಿರದ 507 ಮೀನುಗಾರರ 60 ಕೋಟಿ 584 ಲಕ್ಷ ರೂಪಾಯಿ ಸಾಲ ವಸೂಲಾತಿಗೆ ಬಾಕಿ ಇದೆ. 
ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಸರ್ಕಾರ ಸಾಲ ಮನ್ನಾ ಮಾಡಿರುವುದರಿಂದ  ಸುಮಾರು 23 ಸಾವಿರದ 507 ಮೀನುಗಾರರು ಆರ್ಥಿಕ ಸಂಕಷ್ಟದಿಂದ ಹೊರ ಬಂದು ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಿಕೊಟ್ಟಂತಾಗಿದೆ.
ಮೀನುಗಾರರು ಹಾಗೂ ವಿಶೇಷವಾಗಿ ಮಹಿಳಾ ಮೀನುಗಾರರು, ಮೀನು ಮಾರಾಟ ಪರಿಕರಗಳ ಖರೀದಿ, ಮೀನಿನ ವ್ಯಾಪಾರಕ್ಕಾಗಿ ಬಂಡವಾಳ, ಮೀನಿನ ಸಂರಕ್ಷಣೆ ಹಾಗೂ ಮೀನಿನ ಸಾಗಾಣಿಕೆ ಇತರೆ ಮೀನುಗಾರಿಕೆ ಸಂಬಂಧಿತ ಚಟುವಟಿಕೆಗಳನ್ನು ಕೈಗೊಳ್ಳಲು ಆರ್ಥಿಕ ನೆರವು ನೀಡುವ ದೃಷ್ಟಿಯಿಂದ ಶೇ, 2 ರಷ್ಟು ಬಡ್ಡಿದರದಲ್ಲಿ ವಾಣಿಜ್ಯ ಬ್ಯಾಂಕ್ ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಂದ ಸಾಲ ಪಡೆಯುವ ಯೋಜನೆಯನ್ನು ಮೀನುಗಾರಿಕೆ ಇಲಾಖೆ ಅನುಷ್ಠಾನಗೊಳಿಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com