ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷ, ಸದಸ್ಯರ ನಾಮನಿರ್ದೇಶನ ರದ್ದುಪಡಿಸಿದ ಸರ್ಕಾರ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯ ಎಲ್ಲಾ ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷರು, ಸದಸ್ಯರ ನಾಮನಿರ್ದೇಶನವನ್ನು ತಕ್ಷಣದಿಂದ...
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯ ಎಲ್ಲಾ ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷರು, ಸದಸ್ಯರ ನಾಮನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಸರ್ಕಾರ ಆದೇಶ ಹೊರಡಿಸಿದೆ. 
ಕರ್ನಾಟಕ ಸಾಹಿತ್ಯ ಅಕಾಡೆಮಿ, ನಾಟಕ , ಜಾನಪದ, ಲಲಿತಕಲಾ,  ಸಂಗೀತ, ನೃತ್ಯ ಅಕಾಡೆಮಿ, ಶಿಲ್ಪಕಲಾ , ಯಕ್ಷಗಾನ ಅಕಾಡೆಮಿ, ಕೊಂಕಣಿ ಸಾಹಿತ್ಯ, ಕೊಡವ ಸಾಹಿತ್ಯ, ಬ್ಯಾರಿ ಸಾಹಿತ್ಯ , ಅರೆ ಭಾಷೆ ಸಾಹಿತ್ಯ ಅಕಾಡೆಮಿ, ಕನ್ನಡ ಪುಸ್ತಕ ಪ್ರಾಧಿಕಾರ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರ ನಾಮನಿರ್ದೇಶನವನ್ನು ರದ್ದುಪಡಿಸಲಾಗಿದೆ. 
ಈ ಅಕಾಡೆಮಿಗಳು, ಪ್ರಾಧಿಕಾರದ ತೆರವಾಗಿರುವ ಅಧ್ಯಕ್ಷ ಸ್ಥಾನಕ್ಕೆ ಹಂಗಾಮಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಯನ್ನು ನೇಮಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com