ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಮೃತದೇಹ ಪತ್ತೆಯಾಗಿದ್ದು ಹೇಗೆ, ಪ್ರತ್ಯಕ್ಷ ದರ್ಶಿ ಹೇಳಿದ್ದೇನು?

ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ್ ಅವರ ಮೃತದೇಹ ಸತತ 46 ಗಂಟೆಗಳ ಬಳಿಕ ಪತ್ತೆಯಾಗಿದ್ದು, ಸ್ಥಳೀಯ ಮೀನುಗಾರರು ಮೊದಲು ಮೃತದೇಹವನ್ನು ಪತ್ತೆ ಮಾಡಿದ್ದಾರೆ.
ಮೀನುಗಾರ ರಿತೇಶ್
ಮೀನುಗಾರ ರಿತೇಶ್
ಮಂಗಳೂರು: ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ್ ಅವರ ಮೃತದೇಹ ಸತತ 46 ಗಂಟೆಗಳ ಬಳಿಕ ಪತ್ತೆಯಾಗಿದ್ದು, ಸ್ಥಳೀಯ ಮೀನುಗಾರರು ಮೊದಲು ಮೃತದೇಹವನ್ನು ಪತ್ತೆ ಮಾಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಮೃತ ದೇಹ ಪತ್ತೆ ಮಾಡಿದ ಸ್ಥಳೀಯ ಮೀನುಗಾರ ರಿತೇಶ್ ಎಂಬುವವರು, 'ನಾವು ನದಿಯಲ್ಲಿ ಹೋಗುವಾಗ ಬೆಳಗ್ಗೆ 7 ಗಂಟೆ ಸುಮಾರಿನಲ್ಲಿ ಹೊಯ್ಗೆ ಬಜಾರ್ ಪ್ರಾಂತ್ಯದಲ್ಲಿ ದೇಹವೊಂದು ಕಾಣಿಸಿತ್ತು. ಕೂಡಲೇ ನಾವು ಅಲ್ಲಿಗೆ ಹೋದಾಗ ಅದು ಸಿದ್ಧಾರ್ಥ್ ಅವರದ್ದೇ ಎಂದು ಶಂಕೆಯಾಯಿತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದೆವು ಎಂದು ಹೇಳಿದ್ದಾರೆ.
ಇನ್ನು ಸಿದ್ಧಾರ್ಥ್ ಅವರನ್ನು ಹುಡುಕಲು ನಮ್ಮ ಸಂಸ್ಥೆಯಿಂದಲೂ ಕೂಡ ಸೂಚನೆ ಸಿಕ್ಕಿತ್ತು. ಮಂಗಳವಾರ ರಾತ್ರಿ ಸಿಗದ ಕಾರಣ ಇಂದು ಬೆಳಗ್ಗೆ ಕಾರ್ಯಾಚರಣೆ ಆರಂಭಿಸಿದ್ದೆವು. ಮಂಗಳಾದೇವಿ ದೇವಸ್ಥಾನದ ಹಿಂಭಾಗದಲ್ಲಿ ರಸ್ತೆಯಿದೆ. ಆ ರಸ್ತೆಯಲ್ಲಿ ಹೊಯಿಗೆ ಬಜಾರ್ ಎಂಬ ಪ್ರದೇಶವಿದೆ. ಇಲ್ಲಿ ನದಿ ಒಂದು ಕಡೆಯಿಂದ ಮಂಗಳೂರು ಬಂದರನ್ನು ತಲುಪುತ್ತದೆ. ಇನ್ನೊಂದು ಕಡೆಯಿಂದ ಸಮುದ್ರವನ್ನು ತಲುಪುತ್ತದೆ. ಈ ಪ್ರದೇಶದಲ್ಲಿ ಸಿದ್ಧಾರ್ಥ್ ಮೃತದೇಹ ಸಿಕ್ಕಿದೆ. ಹೊಯ್ಗೆ ಬಜಾರ್ ನಲ್ಲಿ ಶೋಧ ನಡೆಸುತ್ತಿದ್ದಾಗೆ ಬೆಳಗ್ಗೆಯೇ ಮೃತದೇಹ ಪತ್ತೆಯಾಗಿತ್ತು. ಇದು ಸಿದ್ಧಾರ್ಥ್ ಅವರೇ ಎಂದು ಅನುಮಾನ ಬಂತು. ಬಳಿಕ ಅವರ ಮೃತದೇಹವನ್ನು ದಡಕ್ಕೆ ತಂದು ಪೊಲೀಸರಿಗೆ ಮಾಹಿತಿ ನೀಡಿದೆವು ಎಂದು ರಿತೇಶ್ ಹೇಳಿದ್ದಾರೆ.
ಸೋಮವಾರ ತಡರಾತ್ರಿಯಿಂದ ಮಂಗಳವಾರ ತಡರಾತ್ರಿವರೆಗೆ ಶೋಧ ಕಾರ್ಯ ನಡೆಸಲಾಗಿದ್ದು, ಆ ಬಳಿಕ ಸ್ಥಗಿತಗೊಳಿಸಲಾಗಿತ್ತು. ಇಂದು ಮುಂಜಾನೆ 4 ಗಂಟೆ ಸುಮಾರಿನಿಂದ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿತ್ತು.  ಒಟ್ಟಾರೆ 36 ಗಂಟೆಗಳ ನಿರಂತರ ಕಾರ್ಯಾಚರಣೆಯ ಬಳಿಕ ಇದೀಗ ಸಿದ್ಧಾರ್ಥ್ ಪತ್ತೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com