ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ರಾಹುಲ್ ಗಾಂಧಿ ಬೆಂಬಲಿಸಬೇಕು: ಪೇಜಾವರ ಶ್ರೀ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಬೇಕು. ಇದಕ್ಕೆ ಕಾಂಗ್ರೆಸ್‍ನ ರಾಹುಲ್ ಗಾಂಧಿ ಸೇರಿದಂತೆ ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ಸಂಸದರು ಸಹಕಾರ

Published: 01st June 2019 12:00 PM  |   Last Updated: 01st June 2019 10:26 AM   |  A+A-


Pejavar seer

ಶ್ರೀ ವಿಶ್ವೇಶ ತೀರ್ಥ ಪೇಜಾವರ ಸ್ವಾಮೀಜಿ

Posted By : SD SD
Source : The New Indian Express
ಉಡುಪಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಬೇಕು. ಇದಕ್ಕೆ ಕಾಂಗ್ರೆಸ್‍ನ ರಾಹುಲ್ ಗಾಂಧಿ ಸೇರಿದಂತೆ ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ಸಂಸದರು ಸಹಕಾರ ನೀಡಬೇಕು ಎಂದು ಉಡುಪಿಯ ಶ್ರೀ ವಿಶ್ವೇಶ ತೀರ್ಥ ಪೇಜಾವರ ಸ್ವಾಮೀಜಿ ಆಗ್ರಹಿಸಿದ್ದಾರೆ.

ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಗಳು ಕೇವಲ ರಾಹುಲ್ ಗಾಂಧಿ ಮಾತ್ರವಲ್ಲಾ ಎಲ್ಲಾ ಸಂಸದರು ಕೂಡ ಒಟ್ಟಾಗಿ ರಾಮಮಂದಿರ ನಿರ್ಮಾಣ ಮಾಡಲು ಕೈ ಜೋಡಿಸಬೇಕು ಎಂದು ಕರೆ ನೀಡಿದ್ದಾರೆ.

ರಾಜಕೀಯ ಪ್ರಚಾರ ವೇಳೆಯೂ ಅಭಿವೃದ್ಧಿ ಕಡೆಗೆ ಪಕ್ಷಗಳು ಗಮನವೇ ಕೊಡಲಿಲ್ಲ. ಮುಂದಾದರೂ ಅಭಿವೃದ್ಧಿ ಬಗ್ಗೆ ಮಾತನಾಡುವಂತಾಗಬೇಕು. ಹಿಂದೂ ವಿಚಾರ ತೆಗೆದರೆ ಬಹುಸಂಖ್ಯಾತರು ಜಾಗೃತರಾಗುತ್ತಾರೆ. ಪ್ರತ್ಯೇಕ ಹೋರಾಟ ಮಾಡಿದರೆ ವಿಪಕ್ಷಗಳು ಹೆಚ್ಚಿನ ಸೀಟು ಗೆಲ್ಲುತ್ತಿದ್ದವು ಎಂದು ಅಭಿಪ್ರಾಯಪಟ್ಟರು. 

2 ನೇ ಅವಧಿಗೆ ಅಧಿಕಾರ ವಹಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಸರಕಾರದಿಂದ ಅಭಿವೃದ್ಧಿ ಕಾರ್ಯಗಳ ನಿರೀಕ್ಷೆಯಲ್ಲಿದ್ದೇವೆ. ದೇಶದ ರಕ್ಷಣೆ, ಕಾಶ್ಮೀರದ ಸಮಸ್ಯೆ ಪರಿಹಾರ ಕಾಣಬೇಕು. ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು. ಕೃಷಿಗೆ ಮಾರಕವಾಗದ ಉದ್ಯಮ ಸ್ಥಾಪನೆಯಾಗಬೇಕೆಂದರು. ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp