ಪ್ರಾಪರ್ಟಿ ಮಾಲೀಕರ ಜೇಬಿಗೆ ಬೀಳಲಿದೆ ಕತ್ತರಿ: ಆಸ್ತಿ ತೆರಿಗೆ ಹೆಚ್ಚಳಕ್ಕೆ ಮೈತ್ರಿ ಸರ್ಕಾರ ಗ್ರೀನ್ ಸಿಗ್ನಲ್

ಕೆಎಂಸಿ ಕಾಯ್ದೆಯಲ್ಲಿರುವಂತೆ ಆಸ್ತಿ ತೆರಿಗೆ ಹೆಚ್ಚಳಕ್ಕೆ ಬಿಬಿಎಂಪಿ ಮುಂದಾಗಿದ್ದು, 2020-21ನೇ ಸಾಲಿನಿಂದ ಹೆಚ್ಚುವರಿ ತೆರಿಗೆ ವಸೂಲಿಗೆ ಅನುಮತಿ ಕೋರಿ ...
ಬಿಬಿಎಂಪಿ
ಬಿಬಿಎಂಪಿ
ಬೆಂಗಳೂರು: ಕೆಎಂಸಿ ಕಾಯ್ದೆಯಲ್ಲಿರುವಂತೆ ಆಸ್ತಿ ತೆರಿಗೆ ಹೆಚ್ಚಳಕ್ಕೆ ಬಿಬಿಎಂಪಿ ಮುಂದಾಗಿದ್ದು, 2020-21ನೇ ಸಾಲಿನಿಂದ ಹೆಚ್ಚುವರಿ ತೆರಿಗೆ ವಸೂಲಿಗೆ ಅನುಮತಿ ಕೋರಿ ಕೌನ್ಸಿಲ್​ನಲ್ಲಿ ವಿಷಯ ಮಂಡಿಸಿದ್ದು, ಮೈತ್ರಿ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಕರ್ನಾಟಕ ಮುನ್ಸಿಪಲ್ ಕಾಯ್ದೆ ಪ್ರಕಾರ ಪ್ರತಿ 3 ವರ್ಷಕ್ಕೊಮ್ಮೆ ಸ್ಥಳೀಯ ನಗರಾಡಳಿತ ತನ್ನ ವ್ಯಾಪ್ತಿಯಲ್ಲಿನ ಆಸ್ತಿಗಳ ತೆರಿಗೆ ಹೆಚ್ಚಳ ಮಾಡಬೇಕಿದೆ. ನಿಯಮದಂತೆ 2019-20ನೇ ಸಾಲಿನಲ್ಲಿ ತೆರಿಗೆ ಹೆಚ್ಚಳ ಮಾಡಬೇಕಿತ್ತು. ಆದರೆ, ಲೋಕಸಭೆ ಚುನಾವಣೆಯಿದ್ದ ಕಾರಣದಿಂದ ತೆರಿಗೆ ಹೆಚ್ಚಳ ಮಾಡಿರಲಿಲ್ಲ. ಹೀಗಾಗಿ 2020-21ನೇ ಸಾಲಿನಿಂದ ತೆರಿಗೆ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ.
ಕೆಎಂಸಿ ಕಾಯ್ದೆ ಪ್ರಕಾರ ಬಿಬಿಎಂಪಿ ಆಯುಕ್ತರು ವಸತಿ ಕಟ್ಟಡಗಳಿಗೆ ಶೇ.20 ಮತ್ತು ವಾಣಿಜ್ಯ ಆಸ್ತಿಗಳಿಗೆ ಶೇ.25 ತೆರಿಗೆ ಹೆಚ್ಚಳದ ಕುರಿತ ಪ್ರಸ್ತಾವನೆಗೆ ಮೈತ್ರಿ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. 
ಬೆಂಗಳೂರು ಮಹಾನಗರ ಪಾಲಿಕೆ ಬಿಬಿಎಂಪಿಯಾಗಿ ಪರಿವರ್ತನೆಗೊಂಡ ನಂತರದಿಂದ ತೆರಿಗೆ ಹೆಚ್ಚಳ ಮಾಡಿರಲಿಲ್ಲ. ಅಂದರೆ 2008ರಂದು ತೆರಿಗೆ ಹೆಚ್ಚಳ ಮಾಡಲಾಗಿತ್ತು. ಅದಾದ ನಂತರ 2010ರಲ್ಲಿ ಬಿಬಿಎಂಪಿ ಚುನಾವಣೆ ನಡೆದಿತ್ತು. 
ಅದಾದ 3 ವರ್ಷಗಳ ನಂತರ ತೆರಿಗೆ ಹೆಚ್ಚಿಸಬೇಕಿತ್ತು. ಆದರೆ, ವಿಧಾನಸಭೆ, ಲೋಕಸಭೆ ಹಾಗೂ ಬಿಬಿಎಂಪಿ ಚುನಾವಣೆಗಳು ಎದುರಾದ ಹಿನ್ನೆಲೆಯಲ್ಲಿ ತೆರಿಗೆ ಹೆಚ್ಚಳಕ್ಕೆ ಮುಂದಾಗಿರಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com